ನವದೆಹಲಿ : ಇತ್ತೀಚಿನ ದಿನಗಳಲ್ಲಿ ನಕಲಿ ವಿವಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇದೀಗ ಕರ್ನಾಟಕದ ಒಂದು ವಿಶ್ವ ವಿದ್ಯಾಲಯ ಸೇರಿದಂತೆ ದೇಶದ ವಿವಿಧೆಡೆಯಲ್ಲಿ 24 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದೆ ಎಂದು ಖುದ್ದು ಯುಜಿಸಿ (ವಿಶ್ವವಿದ್ಯಾಲಯ ಅನುದಾನ ಆಯೋಗ ) ಮಾಹಿತಿ ನೀಡಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಲೋಕಸಣೆಯಲ್ಲಿ ಕೇಳಲಾದ ಲಿಖಿತ ಪ್ರಶ್ನೆಗೆ ಉತ್ತರಿಸಿದ ಅವರು ದೇಶದಲ್ಲಿ ನಿಯಮ ಉಲ್ಲಂಘನೆ ಮಾಡಿದ ಕುರಿತು ಎರಡು ವಿವಿಗಳನ್ನು ಗುರುತಿಸಲಾಗಿದ್ದು, ದೇಶದಲ್ಲಿರುವ ಒಟ್ಟು 24 ಸ್ವಯಂ ಘೋಷಿತ ವಿಶ್ವ ವಿದ್ಯಾಲಯಗಳನ್ನು ನಕಲಿ ಎಂದು ಘೋಷಿಸಲಾಗಿದೆ ಎಂದಿದ್ದಾರೆ.
ಕರ್ನಾಟಕ ರಾಜ್ಯದ ಬಡಗನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಶನ್ ಸೊಸೈಟಿಯನ್ನು ನಕಲಿ ವಿವಿ ಎಂದು ಘೋಷಿಸಲಾಗಿದ್ದು, ಉತ್ತರ ಪ್ರದೇಶದ ವಾರಣಾಸಿಯ ಸಂಸ್ಕೃತ ವಿಶ್ವವಿದ್ಯಾಲಯ, ಮಹಿಳಾ ಗ್ರಾಮ ವಿದ್ಯಾಪೀಠ, ಅಲಹಾಬಾದ್, ಗಾಂಧಿ ಹಿಂದಿ ವಿದ್ಯಾಪೀಠ, ಅಲಹಾಬಾದ್, ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ, ಕಾನ್ಪುರ ನೇತಾಜಿ ಸುಭಾಷ್ ಚಂದ್ರ ಬೋಸ್ ಮುಕ್ತ ವಿಶ್ವವಿದ್ಯಾಲಯ, ಅಲಿಘರ್; ಉತ್ತರ ಪ್ರದೇಶ ವಿಶ್ವವಿದ್ಯಾಲಯ, ಮಥುರಾ ಮಹಾರಾಣಾ ಪ್ರತಾಪ್ ಶಿಕ್ಷಾ ನಿಕೇತನ ವಿಶ್ವವಿದ್ಯಾಲಯ, ಪ್ರತಾಪಘರ್ ಮತ್ತು ಇಂದ್ರಪ್ರಸ್ಥ ಶಿಕ್ಷಾ ಪರಿಷತ್, ನೋಯ್ಡಾ ಇವುಗಳನ್ನು ನಕಲಿ ವಿವಿಗಳೆಂದು ಗುರುತಿಸಲಾಗಿದೆ.
ಅಲ್ಲದೇ ದೆಹಲಿಯ ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್, ಯುನೈಟೆಡ್ ನೇಷನ್ಸ್ ಯೂನಿವರ್ಸಿಟಿ, ವೊಕೇಷನಲ್ ಯೂನಿವರ್ಸಿಟಿ, ಎಡಿಆರ್ ಸೆಂಟ್ರಿಕ್ ಜುರಿಡಿಕಲ್ ವಿಶ್ವವಿದ್ಯಾಲಯ, ಇಂಡಿಯನ್ ಇನ್ ಸ್ಟಿಟ್ಯೂಷನ್ ಆಫ್ ಸೈನ್ಸ್ ಅಂಡ್ ಎಂಜಿನಿಯರಿಂಗ್, ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್ ಎಂಪ್ಲಾಯ್ ಮೆಂಟ್, ಮತ್ತು ಅಧ್ಯತ್ಮಿಕ್ ವಿಶ್ವವಿದ್ಯಾಲಯ (ಆಧ್ಯಾತ್ಮಿಕ ವಿಶ್ವವಿದ್ಯಾಲಯ)
ಕೋಲ್ಕತ್ತಾದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಮತ್ತು ಕೋಲ್ಕತ್ತಾದ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಅಂಡ್ ರಿಸರ್ಚ್ ಮತ್ತು ರೂರ್ಕೆಲಾ ದ ನವಭಾರತ್ ಶಿಕ್ಷಾ ಪರಿಷತ್ ಮತ್ತು ಉತ್ತರ ಒರಿಸ್ಸಾ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಪುದುಚೇರಿಯ ಶ್ರೀ ಬೋಧಿ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಕ್ರೈಸ್ಟ್ ಟೆಸ್ಟಮೆಂಟ್ ಡೀಮ್ಡ್ ವಿಶ್ವವಿದ್ಯಾಲಯ, ರಾಜಾ ಅರೇಬಿಕ್ ವಿಶ್ವವಿದ್ಯಾಲಯ, ಸೇಂಟ್ ಜಾನ್ಸ್ ವಿಶ್ವವಿದ್ಯಾಲಯಗಳನ್ನು ನಕಲಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು, ಜನಸಾಮಾನ್ಯರು, ವಿದ್ಯುನ್ಮಾನ ಮುದ್ರಣ ಮಾಧ್ಯಮ ಸೇರಿದಂತೆ ವಿವಿಧ ಮೂಲಗಳಿಂದ ಬಂದ ದೂರುಗಳನ್ನು ಆಧರಿಸಿ ಯುಜಿಸಿ ಈ ಕ್ರಮವನ್ನು ಕೈಗೊಂಡಿದೆ ಎಂದು ಲೋಕಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರು ಮಾಹಿತಿಯನ್ನು ನೀಡಿದ್ದಾರೆ.