74ನೇ ಸ್ವಾತಂತ್ರ್ಯೋತ್ಸವ ಸಂಭ್ರಮ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

0

ನವದೆಹಲಿ : ದೇಶದಾದ್ಯಂತ ಇಂದು 74ನೇ ಸ್ವಾತಂತ್ರ್ಯೋತ್ಸವದ ಸಂಭ್ರ. ಕೊರೊನಾ ವೈರಸ್ ಭೀತಿಯ ನಡುವಲ್ಲೇ ಸುರಕ್ಷತಾ ಕ್ರಮಗಳನ್ನು ಕೈಗೊಂಡು ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಅವರು ಧ್ವಜಾರೋಹಣ ಮಾಡಿದ್ದಾರೆ.


ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಕೆಂಪುಕೋಟೆಯನ್ನು ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.

ದ್ವಜಾರೋಹಣಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮಹಾತ್ಮ ಗಾಂಧಿ ಸಮಾಧಿ ರಾಜ್‍ಘಾಟ್‍ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ನಂತರ ಕೆಂಪು ಕೋಟೆಯ ಮುಖ್ಯ ದ್ವಾರಕ್ಕೆ ಆಗಮಿಸುತ್ತಿದ್ದಂತೆ ಮೂರು ಸೇನೆಯಿಂದ ಮೋದಿ ಅವರಿಗೆ ಗೌರವ ಸಲ್ಲಿಸಿದ್ದಾರೆ. ನಂತರ ಮೋದಿ ಧ್ವಜಾರೋಹಣ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಸಾಕಷ್ಟು ಬಿಗಿ ಭದ್ರತೆ ವಹಿಸಲಾಗಿತ್ತು. ಎನ್‍ಎಸ್‍ಜಿ, ಎಸ್ಪಿಜಿ, ಸಿಆರ್‌ಪಿಎಫ್, ಬಿಎಸ್‍ಎಫ್, ದೆಹಲಿ ಪೊಲಿಸ್ ಸೇರಿದಂತೆ 4,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೇ 30ಕ್ಕೂ ಅಧಿಕ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಈ ಬಾರಿ ಸಾರ್ವಜನಿಕರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಇಲ್ಲ. ಕೇವಲ ಮುಖ್ಯ ಅಥಿತಿಗಳಿಗೆ ಕುಟುಂಬಸ್ಥರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ಸಾಮಾಜಿಕ ಅಂತರದಡಿ ಆಸನಗಳ ವ್ಯವಸ್ಥೆ ಮಾಡಲಾಗಿದೆ.

Leave A Reply

Your email address will not be published.