ಲಡಾಕ್ : ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ತಾರಕಕ್ಕೇರುತ್ತಿದೆ. ಗ್ಯಾಲ್ವಾನ್ ಕಣಿವೆಯಲ್ಲಿ ಭಾರತೀಯ ಸೈನಿಕರು ಹಾಗೂ ಚೀನಾ ಸೈನಿಕರ ನಡುವಿನ ಹೊಡೆದಾಟದಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದು, ಚೀನಾದ 43ಕ್ಕೂ ಅಧಿಕ ಸೈನಿಕರು ಸಾವನ್ನಪ್ಪಿರುವ ಕುರಿತು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ನಿನ್ನೆ ರಾತ್ರಿಯಿಂದಲೇ ಗ್ಯಾಲ್ವಾನ್ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆಯುತ್ತಲೇ ಇತ್ತು. ಆರಂಭದಲ್ಲಿ ಭಾರತದ ಮೂವರು ಸೈನಿಕರು ಹುತಾತ್ಮರಾಗಿದ್ದರೆ, ಭಾರತೀಯ ಯೋಧರು ಚೀನಾದ 10 ಮಂದಿ ಸೈನಿಕರನ್ನು ಹೊಡೆದುರುಳಿಸಿದ್ದರು. ಇದೀಗ ಮತ್ತೆ ಸಂಘರ್ಷ ನಡೆದಿದ್ದು, ಭಾರೀ ಪ್ರಮಾಣದಲ್ಲಿ ಸಾವು ನೋವು ಸಂಭವಿಸಿರುವ ಕುರಿತು ವರದಿಯಾಗಿದೆ.

ಚೀನಾ ಹಾಗೂ ಭಾರತ ಸೈನಿಕರ ನಡುವಿನ ಸಂಘರ್ಷವನ್ನು ಶಮನ ಮಾಡುವ ನಿಟ್ಟಿನಲ್ಲಿ ಎರಡೂ ದೇಶಗಳ ಅಧಿಕಾರಿಗಳ ನಡುವೆ ಸಭೆ ನಡೆಸಲಾಗಿದೆ. ಮಾತ್ರವಲ್ಲ ಗೃಹ ಸಚಿವ ರಾಜನಾಥ್ ಸಿಂಗ್ ರಕ್ಷಣಾ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ.
