ದೇಶಾದ್ಯಂತ ಲಾಕ್‌ಡೌನ್ ಜಾರಿ : ಕೇಂದ್ರ ಸರಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ : ಕೊರೊನಾ‌ ವೈರಸ್ ಸೋಂಕಿನ ಆರ್ಭಟ ದೇಶವನ್ನೇ ತತ್ತರಿಸಿ ಹೋಗುವಂತೆ ಮಾಡಿದೆ. ಸೋಂಕು ಹರಡುವಿಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ದೇಶವನ್ನೇ ಲಾಕ್ ಡೌನ್ ಮಾಡಿ‌ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆಯನ್ನು ನೀಡಿದೆ.

ಸೂಪರ್ ಸ್ಪ್ರೆಡ್ಡರ್‌ ಕಾರ್ಯಕ್ರಮಗಳಿಗೆ ನಿಷೇಧ ಹೇರಬೇಕು. ಈ ಮೂಲಕ ಜನರು ಗುಂಪು ಸೇರುವುದನ್ನು ತಡೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾರ್ವಜನಿಕ ಕಲ್ಯಾಣದ ದೃಷ್ಟಿಯಿಂದ ಲಾಕ್‌ಡೌನ್‌ ಜಾರಿಯ ಕುರಿತು ಪರಿಶೀಲನೆಯನ್ನು ನಡೆಸಬೇಕು. ಲಾಕ್‌ಡೌನ್‌ನಿಂದ ಬಡವರಿಗೆ ಕಷ್ಟವಾಗುವುದರಿಂದ ಲಾಕ್‌ಡೌನ್‌ ಜಾರಿಗೂ ಮುನ್ನ ಆ ಸಮುದಾಯಗಳ ಬಗ್ಗೆ ಕಾಳಜಿ ತೆಗೆದುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಆಭಿಪ್ರಾಯಪಟ್ಟಿದೆ.

ಕೊರೊನಾ ಸೋಂಕನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈವರೆಗೆ ಕೈಗೊಂಡಿರುವ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳುವ ಯೋಜನೆಯ ಬಗ್ಗೆ ವಿವರಗಳನ್ನು ನೀಡು ವಂತೆ ಸುಪ್ರೀಂ ಕೋರ್ಟ್ ಸೂಚನೆಯನ್ನು ನೀಡಿದೆ.

ಅಮೇರಿಕಾ ಕೂಡ ಕೆಲವು ವಾರಗಳ ಕಾಲ ಭಾರತವನ್ನು ಲಾಕ್ ಡೌನ್ ಮಾಡುವ ಸಲಹೆಯನ್ನು ನೀಡಿತ್ತು.‌ ಇದೀಗ ಸುಪ್ರೀಂ ಕೋರ್ಟ್ ಕೂಡ ಲಾಕ್ ಡೌನ್ ಸಲಹೆಯನ್ನು ನೀಡಿದೆ. ದೇಶದಲ್ಲಿ ಕೊರೊನಾ ಸೋಂಕಿ ನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಹೇರಿಕೆಯಾಗುವುದು ಬಹುತೇಕ ಖಚಿತ.

Comments are closed.