ನವದೆಹಲಿ : ಭಾರತದಲ್ಲಿ ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 3,82,315 ಮಂದಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ ಬರೋಬ್ಬರಿ 3,780 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ದಿನೇ ದಿನೇ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾಗು ತ್ತಿದೆ. ಒಂದೇ ದಿನ 3,82,315 ಮಂದಿಗೆ ಸೋಂಕು ಕಾಣಿಸಿಕೊಳ್ಳುವ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 20,665,148ಕ್ಕೆ ಏರಿಕೆ ಯಾಗಿದೆ.
ಅಲ್ಲದೇ 3,780 ಸೋಂಕಿತರು ಸಾವನ್ನಪ್ಪುವ ಮೂಲಕ ಇದುವರೆಗೆ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,26,188 ಕ್ಕೆ ಏರಿಕೆ ಯಾಗಿದೆ. ಸದ್ಯ ದೇಶದಲ್ಲಿ 3,487,229 ಸಕ್ರೀಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
