ಭಾನುವಾರ, ಏಪ್ರಿಲ್ 27, 2025
HomeNationalಕೊರೋನಾ ಎಫೆಕ್ಟ್….! ಅಂತಾರಾಷ್ಟ್ರೀಯ ವಿಮಾನಗಳ ಮೇಲೆ ಅಗಸ್ಟ್ 31 ರವರೆಗೆ ನಿರ್ಬಂಧ…!!

ಕೊರೋನಾ ಎಫೆಕ್ಟ್….! ಅಂತಾರಾಷ್ಟ್ರೀಯ ವಿಮಾನಗಳ ಮೇಲೆ ಅಗಸ್ಟ್ 31 ರವರೆಗೆ ನಿರ್ಬಂಧ…!!

- Advertisement -


ನವದೆಹಲಿ: ಕೊರೋನಾ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಯಾನದ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ಅಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.

ಕೊರೋನಾ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಯಾನದ ಮೇಲೆ ನಿರ್ಬಂಧವನ್ನು ಅಗಸ್ಟ್ 31 ರವರೆಗೆ ವಿಸ್ತರಿಸಲಾಗಿರುವುದನ್ನು ಡಿಜಿಸಿಎ ಆಡಳಿತಾಧಿಕಾರಿ ಖಚಿತಪಡಿಸಿದ್ದಾರೆ. ಅಲ್ಲದೇ ಕೊರೋನಾ ಪ್ರಕರಣಗಳ ಸಂಖ್ಯೆಯನ್ನು ಆಧರಿಸಿ ಕೆಲವೊಂದು ಮಾರ್ಗದಲ್ಲಿ ಸಂಚಾರ ಅವಕಾಶ ಕಲ್ಪಿಸಲಾಗುವುದು ಎಂದಿದ್ದಾರೆ.

ನಾಗರೀಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ ಈ ವಿಚಾರವನ್ನು ಖಚಿತಪಡಿಸಿದೆ. ವಿಶ್ವದ ಹಲವು  ರಾಷ್ಟ್ರಗಳಲ್ಲಿ ಡೆಲ್ಟಾ ಪ್ಲಸ್ ಸೇರಿದಂತೆ ಕೊರೋನಾ ರೂಪಾಂತರ ತಳಿಗಳ ಸಂಕಷ್ಟ ಹೆಚ್ಚಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೊರೋನಾ ಹಿನ್ನೆಲೆಯಲ್ಲಿ 2020 ಮಾರ್ಚ್ ನಿಂದ ಅಂತಾರಾಷ್ಟ್ರೀಯ ವಿಮಾನಗಳ ಮೇಲೆ ನಿರ್ಬಂಧ ಹೇರಲಾಗಿದ್ದು, ವಂದೇ ಮಾತರಂ ಯೋಜನೆಯಡಿ ಹಲವು ರಾಷ್ಟ್ರಗಳಿಂದ ತುರ್ತು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

RELATED ARTICLES

Most Popular