ನವದೆಹಲಿ : ಕೊರೊನಾ ವೈರಸ್ ಸೋಂಕು ದೇಶದಲ್ಲಿ ಇಳಿಕೆ ಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,34,154 ಮಂದಿಗೆ ಕೊರೊನಾ ಸೋಂಕು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ 2,887 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿಯ ಪ್ರಕಾರ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,84,41,986ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 17,13,413ಕ್ಕೆ ಏರಿಕೆ ಕಂಡಿದೆ.
ದೇಶದಲ್ಲಿ ಒಂದೇ ದಿನದಲ್ಲಿ 2,887ಮಂದಿ ಸಾವನ್ನಪ್ಪಿದ್ದು ಇದುವರೆಗೆ ಸಾವಿನ್ನಪ್ಪಿರುವರ ಸಂಖ್ಯೆ 3,37,989ಕ್ಕೆ ಏರಿಕೆ ಕಂಡಿದೆ. ಅಲ್ಲದೇ 24 ಗಂಟೆಗಳಲ್ಲಿ 2,11,499 ಮಂದಿ ಗುಣಮುಖರಾಗಿದ್ದು, ಇದುವರೆಗೆ ಚೇತರಿಸಿಕೊಂಡವರ ಸಂಖ್ಯೆ 2,63,90,584ಕ್ಕೆ ತಲುಪಿದೆ.