ನವದೆಹಲಿ : ಕೊರೊನಾ ಸೋಂಕಿನ ಆರ್ಭಟಕ್ಕೆ ದೇಶವೇ ತತ್ತರಿಸಿದೆ. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 1,99,569 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ದಿನವೊಂದಕ್ಕೆ ಸೋಂಕಿತರ ಸಂಖ್ಯೆ 2 ಲಕ್ಷದಂಚಿಗೆ ಬಂದು ತಲುಪಿದೆ.

ಕೊರೊನಾ ಎರಡನೇ ಅಲೆಯ ಆರ್ಭಟ ಹೆಚ್ಚುತ್ತಿದ್ದು, ದೇಶದ ಬಹುತೇಕ ರಾಜ್ಯಗಳಲ್ಲಿ ಲಾಕ್ ಡೌನ್ ಹೇರಿಕೆ ಮಾಡಲಾಗಿದೆ. ಮಂಗಳವಾರ 1,82,248 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಬುಧವಾರ ಇದನ್ನು ಮೀರಿ 1,99,569 ದಾಖಲೆಯ ಪ್ರಕರಣಗಳು ಪತ್ತೆಯಾಗಿದೆ.
ಇನ್ನು ಸೋಂಕಿತರ ಜೊತೆಗೆ ಕೊರೊನಾ ಸೋಂಕಿನಿಂದ ಸಾವಿಗೆ ತುತ್ತಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ದೇಶದಲ್ಲಿ ಕಳೆದೊಂದು ದಿನದ ಅವಧಿಯಲ್ಲಿ 1037 ಮಂದಿಯನ್ನು ಹೆಮ್ಮಾರಿ ಬಲಿ ಪಡೆದಿರುವುದು ದೇಶವನ್ನೇ ಚಿಂತೆಗೀಡುಮಾಡಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,40,70,890ಕ್ಕೆ ಏರಿಕೆಯಾಗಿ ದ್ದರೆ, ಸಾವಿನ ಸಂಖ್ಯೆಯು 1,73,152 ಕ್ಕೆ ಹೆಚ್ಚಳ ವಾಗಿದೆ. ದೇಶದಲ್ಲಿ ಇದುವರೆಗೆ ಒಟ್ಟು14,71,592 ಮಂದಿ ಸೋಂಕಿಗೆ ತುತ್ತಾಗಿದ್ದರೆ, ಇದರಲ್ಲಿ 8,944 ಸೋಂಕಿತರು ತುರ್ತು ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.