ನವದೆಹಲಿ : ಭಾರತದಲ್ಲಿ ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 3,86,453 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 3,86,452 ಮಂದಿಗೆ ಕೊರೊನಾ ಸೋಂಕು ಹೊಸದಾಗಿ ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 18,762,976 ಕ್ಕೆ ಏರಿಕೆಯಾಗಿದೆ. ಇನ್ನು ಕೊರೊನಾ ಸೋಂಕಿಗೆ ಬಲಿಯಾಗುವವರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 3,498 ಕೊರೊನಾ ಸೋಂಕಿಗೆ ಬಲಿಯಾಗಿ ದ್ದು, ಕೊರೊನಾದಿಂದ ಬಲಿಯಾದವರ ಸಂಖ್ಯೆ 2,08,330 ಕ್ಕೆ ಏರಿಕೆಯಾಗಿದೆ.
ಕೊರೊನಾ ವೈರಸ್ ಸೋಂಕಿನ ಪ್ರಮಾಣ ದಿನೇ ದಿನೇ ಹೆಚ್ಚಳವಾಗುತ್ತಿ ರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
