24 ಗಂಟೆಯಲ್ಲಿ 4,329 ಮಂದಿಯನ್ನು ಬಲಿ ಪಡೆದ ಕೊರೊನಾ

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯನ್ನು ಕಂಡಿದ್ರೆ, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 4,329 ಮಂದಿ ಯನ್ನು ಬಲಿ ಪಡೆಯೋ ಮೂಲಕ ಕೊರೊನಾ ಮಹಾಮಾರಿ ಆತಂಕ ಮೂಡಿಸಿದೆ.

ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 2,63,533 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,52,28,996ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 33,53,765 ಸಕ್ರಿಯ ಪ್ರಕರಣಗಳಿವೆ. 2,15,96,512 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದರೂ ಕೂಡ ಸಾವನ್ನಪ್ಪುವವರ ಸಂಖ್ಯೆಯನ್ನು ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 4,329 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆ 2,78,719ಕ್ಕೆ ಏರಿಕೆ ಕಂಡಿದೆ.

https://kannada.newsnext.live/madhyapradesh-shivapuri-village-custom-rentingwifes-treadition/

Comments are closed.