ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ರಾಜ್ಯಗಳಿಗೆ ಕಠಿಣ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆಯಿದೆ.
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,73,810 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ ಒಂದೇ ದಿನ ದೇಶ ದಲ್ಲಿ ಒಟ್ಟು 1,619 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,78,769 ಕ್ಕೆ ಏರಿಕೆಯಾಗಿದೆ.
ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ. ಇನ್ನಷ್ಟು ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿ ಮಾಡಲು ಚಿಂತನೆ ನಡೆಯುತ್ತಿದೆ. ಕರ್ನಾಟಕದಲ್ಲಿ ಸೋಂಕು ಮಿತಿಮೀರುತ್ತಿದ್ದು, ಸಭೆಯಲ್ಲಿ ಕಠಿಣ ನಿರ್ಧಾರ ಕೈಗೊಳ್ಳಲು ಸೂಚನೆ ನೀಡುವ ಸಾಧ್ಯತೆಯಿದೆ.