Farm laws Repeal Bill : ಕೃಷಿ ಕಾನೂನು ರದ್ದತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ : ದೇಶದಾದ್ಯಂತ ರೈತರ ವಿರೋಧಕ್ಕೆ ಕಾರಣವಾಗಿದ್ದ ಕೃಷಿ ಕಾನೂನುಗಳ ರದ್ದತಿ ಮಸೂದೆ 2021 (Farm laws Repeal Bill) ಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾದ ಬೆನ್ನಲ್ಲೇ, ವಿರೋಧ ಪಕ್ಷದ ಸದಸ್ಯರ ಘೋಷಣೆಗಳ ಹಿನ್ನೆಲೆಯಲ್ಲಿ ಲೋಕಸಭೆಯನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು.

ಲೋಕಸಭಾ ಕಲಾಪ ಪುನರಾರಂಭವಾದ ನಂತರ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ‘ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ಅನ್ನು ಮಂಡಿಸಿದರು. ನಂತರ ಪ್ರತಿಪಕ್ಷಗಳ ಸಂಸದರ ಗದ್ದಲದ ನಡುವೆ ಮಸೂದೆಯನ್ನು ಸದನದಲ್ಲಿ ಅಂಗೀಕರಿಸಲಾಯಿತು. ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಸೂದೆಯನ್ನು ಸದನದಲ್ಲಿ ಚರ್ಚಿಸಬೇಕೆಂದು ಒತ್ತಾಯಿಸಿದರು.

ವಿಧೇಯಕ ಅಂಗೀಕಾರದ ನಂತರ, ಪ್ರತಿಪಕ್ಷಗಳ ಸದಸ್ಯರ ಗದ್ದಲದ ನಡುವೆ ಲೋಕಸಭೆಯನ್ನು ಮಧ್ಯಾಹ್ನ 2 ಗಂಟೆಗೆ ಮತ್ತೆ ಮುಂದೂಡಲಾಯಿತು. ಮೂರು ‘ಕೃಷಿ ಕಾನೂನುಗಳ ರದ್ದತಿ ಮಸೂದೆ 2021’ ಅನ್ನು ಶುಕ್ರವಾರ ರಾಜ್ಯಸಭಾ ಸದಸ್ಯರ ನಡುವೆ ಮಂಡಿಸಲಾಗಿದೆ.

ನವೆಂಬರ್ 19 ರಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಗುರುನಾನಕ್ ಜಯಂತಿಯ ದಿನದಂದು ಮೂರು ಕೇಂದ್ರ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರು. ಕಳೆದ ವಾರ ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 23 ರಂದು ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ : ವಿದೇಶದಿಂದ ಬರುವವರಿಗೆ 14 ದಿನಗಳ ಕ್ವಾರಂಟೈನ್‌ : ಅಂತರಾಷ್ಟ್ರೀಯ ಪ್ರಯಾಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ

ಇದನ್ನೂ ಓದಿ : ಕೊರೋನಾ ಬಳಿಕ Omicron ಆತಂಕ : ಸಿಲಿಕಾನ್ ಸಿಟಿಗೆ ಬಂದ 598 ಜನರ ಮೇಲೆ ವಿಶೇಷ ನಿಗಾ

( Farm laws Repeal Bill passed in Lok Sabha)

Comments are closed.