ಭಾರತದಲ್ಲಿ ಸಕ್ರೀಯ ಕೊರೊನಾ ಪ್ರಕರಣ 36 ಲಕ್ಷಕ್ಕೆ ಏರಿಕೆ

ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದ್ದರೂ ಕೂಡ ಸಕ್ರೀಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,26,098 ಪ್ರಕರಣ ದಾಖಲಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 36,73,802ಕ್ಕೆ ಏರಿಕೆ ಕಂಡಿದೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ. ಲಾಕ್ ಡೌನ್ ಬೆನ್ನಲ್ಲೇ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ನಿತ್ಯವೂ ನಾಲ್ಕು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಕೊರೊನಾ ಸೋಂಕಿತ ಪ್ರಕರಣ ದಾಖಲಾಗುತ್ತಿದ್ದು, ಇದೀಗ 3 ಲಕ್ಷಕ್ಕೆ ಇಳಿಕೆ ಕಂಡಿದೆ. ಕಳೆದ‌ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 3,26,098 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,43,72,907 ಕ್ಕೆ ಏರಿಕೆಯಾಗಿದೆ.

https://kannada.newsnext.live/bangalore-corona-rulesbreak-fine-3-26cr-police/

ಸೋಂಕಿನ ಏರಿಕೆಯ ಪ್ರಮಾಣದಲ್ಲಿ ಕೊಂಚ ಇಳಿಕೆ ಯಾಗಿದ್ದರೂ ಕೂಡ ಸಾವಿನ ಸಂಖ್ಯೆ ಮಾತ್ರ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ 3,890 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಮಹಾಮಾರಿಗೆ ಬಲಿಯಾದವರ ಸಂಖ್ಯೆ 2,66,207 ಕ್ಕೆ ಏರಿಕೆ ಕಂಡಿದೆ.

https://kannada.newsnext.live/actress-nidhi-subbayya-who-has-revealed-the-divorce-facts-which-ended-10-months/

Comments are closed.