ತಿರುವನಂತರಪುರಂ : ಕೇರಳದಲ್ಲಿ ಕಳೆದ ಕಲವು ಗಂಟೆಗಳಿಂದಲೂ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ಉಂಟಾದ ಭೂ ಕುಸಿತದಿಂದಾಗಿ 10 ಮಂದಿ ಸಾವನ್ನಪ್ಪಿದ್ದು, 18ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೇರಳದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ ಹತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಕಾಣೆಯಾಗಿದ್ದಾರೆ. ನಾಳೆ ಮುಂಜಾನೆಯವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ. ಕೊಟ್ಟಾಯಂ ಜಿಲ್ಲೆಯಲ್ಲಿ ಉಂಟಾಗಿರುವ ಭೂ ಕುಸಿತದಿಂದ 12 ಜನರು ಕಾಣೆಯಾಗಿದ್ದಾರೆ. ಅಲ್ಲದೇ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡು ಸೇರಿಂತೆ ಒಟ್ಟು ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರಕಾರ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯು ನಾಗರಿಕ ಆಡಳಿತವು ಪರಿಸ್ಥಿತಿಯನ್ನು ನಿಭಾಯಿಸಲು ಸಹಾಯಕ್ಕೆ ಮುಂದಾಗಿದೆ. ಮಿ -17 ಮತ್ತು ಸಾರಂಗ್ ಹೆಲಿಕಾಪ್ಟರ್‌ಗಳು ಸನ್ನದ್ಧ ಸ್ಥಿತಿಯಲ್ಲಿವೆ ಮತ್ತು ದಕ್ಷಿಣ ಏರ್ ಕಮಾಂಡ್ ಅಡಿಯಲ್ಲಿರುವ ಎಲ್ಲಾ ನೆಲೆಗಳು ಹೆಚ್ಚಿನ ಎಚ್ಚರಿಕೆಯನ್ನು ಹೊಂದಿವೆ.
ಕೇರಳ ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ. ರಾಜ್ಯದಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಅಧಿಕಾರಿಗಳು ಸರ್ವ ರೀತಿಯಲ್ಲಿಯೂ ಸಜ್ಜಾಗಿರುವಂತೆ ಸೂಚನೆಯನ್ನು ನೀಡಿದ್ದಾರೆ. ಇನ್ನೊಂದೆಡೆಯಲ್ಲಿ ಪ್ರತಿಪಕ್ಷ ನಾಯಕರ ಜೊತೆಗೂ ಸಭೆಯನ್ನು ನಡೆಸಿದ್ದು, ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಹಕಾರ ನೀಡುವಂತೆ ವಿನಂತಿಸಿಕೊಂಡಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ನಿಲ್ಲದ ಮಳೆಯ ಅಬ್ಬರ : ಇನ್ನೂ ಎರಡು ದಿನ ಭಾರಿ ಮಳೆ, 16 ಜಿಲ್ಲೆಯಲ್ಲಿ Yellow ಅಲರ್ಟ್
ಇದನ್ನೂ ಓದಿ : ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರೆಂಜ್ ಅಲರ್ಟ್ ಘೋಷಣೆ
(Kerala heavy rain Triggers Floods, Landslides: Idukki, Kottayam 10 Dead, Many Missing )