ಮಹಾರಾಷ್ಟ್ರ : ಧಾರ್ಮಿಕ ಕಾರ್ಯ ನಡೆಸಿ ವಾಪಾಸಾಗುತ್ತಿದ್ದ ವೇಳೆಯಲ್ಲಿ ದೋಣಿ ಮುಳುಗಡೆಯಾಗಿದ್ದು 3 ಮಂದಿ ಸಾವನ್ನಪ್ಪಿದ್ದು, ಕನಿಷ್ಠ 8 ಮಂದಿ ನಾಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯ ಸಮೀಪದ ವರದಾ ನದಿಯಲ್ಲಿ ನಡೆದಿದೆ.
ಬೆನೊಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹತ್ರಾಣ ಗ್ರಾಮದಲ್ಲಿ ಬೆಳಗ್ಗೆ 10: 30 ರ ಸುಮಾರಿಗೆ ಮೂರು ಕುಟುಂಬಗಳು ದೋಣಿಯಲ್ಲಿ ನದಿಯ ಇನ್ನೊಂದು ದಡಕ್ಕೆ ತೆರಳಿದ್ದಾರೆ. ಧಾರ್ಮಿಕ ಕಾರ್ಯಗಳನ್ನು ಮುಗಿಸಿ ವಾಪಾಸಾಗುತ್ತಿದ್ದ ವೇಳೆಯಲ್ಲಿ ದೋಣಿ ನೀರಿನಲ್ಲಿ ಮುಳುಗಿ ಈ ದುರಂತ ಸಂಭವಿಸಿದೆ. ದುರಂತದಲ್ಲಿ ದೋಣಿಯಲ್ಲಿದ್ದ ಅಪ್ರಾಪ್ತ ಬಾಲಕಿ ಸೇರಿದಂತೆ ಒಟ್ಟು ಮೂವರ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಉಳಿದವರ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.
ಸ್ಥಳದಲ್ಲಿ ಪೊಲೀಸರು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತಂಡಗಳು ಕಾರ್ಯಾಚರಣೆಯನ್ನು ನಡೆಸುತ್ತಿವೆ. ಎಂಟು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ದೋಣಿ ಹಾಗೂ ಮುಳುಗು ತಜ್ಞರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಯುತ್ತಿದೆ.
ದೋಣಿಯಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದೇ ಈ ದುರಂತಕ್ಕೆ ಕಾರಣವೆನ್ನಲಾಗುತ್ತಿದೆ. ದೋಣಿಯನ್ನು ಹತ್ತಿದ ಸ್ವಲ್ಪ ಹೊತ್ತಲೇ ದೋಣಿ ನೀರಿನಲ್ಲಿ ಮುಳುಗುವುದಕ್ಕೆ ಆರಂಭವಾಗಿದೆ. ಕೂಡಲೇ ಎಲ್ಲರೂ ಕೂಗಿ ಕೊಂಡಿದ್ದು, ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಆದರೂ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಆದರೆ ಇದುವರೆಗೆ ಎಷ್ಟು ಮಂದಿಯನ್ನು ರಕ್ಷಿಸಲಾಗಿದೆ ಅನ್ನೋ ಬಗ್ಗೆ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ಇದನ್ನೂ ಓದಿ : ನಟಿಗೆ ಪೋಟೋಶೂಟ್ ಕಂಟಕ: ದೋಣಿ ಏರಿದ್ದಕ್ಕೆ ನಿಮಿಷಾ ಅರೇಸ್ಟ್
ಇದನ್ನೂ ಓದಿ : ಮೂಡಬಿದಿರೆ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಯತ್ನ
(Boat Capsizes 3 dead 8 missing in Maharashtra Amravati )