ಭಾನುವಾರ, ಏಪ್ರಿಲ್ 27, 2025
HomeNationalTata-Air India : ಟಾಟಾ ತೆಕ್ಕೆಗೆ ಏರ್‌ ಇಂಡಿಯಾ : 68 ವರ್ಷದ ಬಳಿಕ ಮರಳಿ...

Tata-Air India : ಟಾಟಾ ತೆಕ್ಕೆಗೆ ಏರ್‌ ಇಂಡಿಯಾ : 68 ವರ್ಷದ ಬಳಿಕ ಮರಳಿ ಪಡೆದ ಟಾಟಾ ಗ್ರೂಪ್

- Advertisement -

ನವದೆಹಲಿ : ಏರ್ ಇಂಡಿಯಾ ಇದೀಗ ಮತ್ತೆ ಟಾಟಾ ಗ್ರೂಪ್ ಪಾಲಾಗಿದೆ. ಏರ್ ಇಂಡಿಯಾ ಸಂಸ್ಥೆಯನ್ನು ಖರೀದಿಸುವಲ್ಲಿ ಟಾಟಾ ಗ್ರೂಪ್ ಯಶಸ್ವಿಯಾಗಿದೆ. ಕೇಂದ್ರ ಸರಕಾರದ ಒಡೆತನದಲ್ಲಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ ಕೊನೆಯ ಹಂತದ ಹೋರಾಟದಲ್ಲಿ ಟಾಟಾ ಸನ್ಸ್ 3000 ಕೋಟಿ ರೂ.ಗೆ ಏರ್ ಇಂಡಿಯಾವನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಸ್ಪೈಸ್ ಜೆಟ್ ಸಂಸ್ಥೆ ಕೂಡ ಬಿಡ್ ಸಲ್ಲಿಸಿದ್ದರೂ ಅತೀ ಹೆಚ್ಚು ಬಿಡ್ ಮಾಡಿದ್ದ ಟಾಟಾ ಬಿಡ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಏರ್ ಇಂಡಿಯಾ ಸಂಸ್ಥೆಯಲ್ಲಿ ಖಾಸಗಿ ಬಂಡವಾಳ ಹೂಡಿಕೆಗೆ ಇತ್ತೀಚೆಗಷ್ಟೇ ಕೇಂದ್ರ ಸರಕಾರ ನಿರ್ಧಾರ ಕೈಗೊಂಡಿದ್ದು, ಟಾಟಾ ಸನ್ಸ್ ಕೊನೆಯ ಹಂತದ ಬಿಡ್ ನಲ್ಲಿ ಗೆಲ್ಲುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಟಾಟಾ ಸನ್ಸ್ 68 ವರ್ಷಗಳ ನಂತರ ವಿಮಾನಯಾನ ಕ್ಷೇತ್ರಕ್ಕೆ ಕಾಲಿಟ್ಟಂತಾಗಿದೆ.

ಇದನ್ನೂ ಓದಿ: Today Gold Price : ಚಿನ್ನದ ದರದಲ್ಲಿ ಭಾರೀ ಇಳಿಕೆ : ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿಯ ಇಂದಿನ ದರ ಎಷ್ಟಿದೆ ಗೊತ್ತಾ ?

ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿತು. ಸ್ವಾತಂತ್ರ್ಯಾನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣ ಗೊಳಿಸಲಾಗಿತ್ತು. ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು. ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಯಿತು ಮತ್ತು ಜುಲೈ 29, 1946 ರಂದು ಏರ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು.

1953 ರಲ್ಲಿ, ಸರ್ಕಾರವು ಏರ್ ಕಾರ್ಪೊರೇಷನ್ ಕಾಯ್ದೆಯನ್ನು ಅಂಗೀಕರಿಸಿತು ಮತ್ತು ಕಂಪನಿಯ ಸ್ಥಾಪಕ ಜೆಆರ್ ಡಿ ಟಾಟಾ ಅವರಿಂದ ಮಾಲೀಕತ್ವದ ಹಕ್ಕುಗಳನ್ನು ಖರೀದಿಸಿತು. ನಂತರ ಈ ಕಂಪನಿಯನ್ನು ಏರ್ ಇಂಡಿಯಾ ಇಂಟರ್ ನ್ಯಾಷನಲ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಯಿತು. ಹೀಗಾಗಿ ಟಾಟಾ ಗ್ರೂಪ್ 68 ವರ್ಷಗಳ ನಂತರ ಮತ್ತೊಮ್ಮೆ ತನ್ನ ಸ್ವಂತ ಕಂಪನಿಯನ್ನು ಹಿಂತೆಗೆದುಕೊಂಡಿದೆ.

ಇದನ್ನೂ ಓದಿ: ದೇಶದಲ್ಲಿ 59 ಲಕ್ಷ ಉದ್ಯೋಗ ಸೃಷ್ಟಿಗೆ ಹೊಸ ಫ್ಲ್ಯಾನ್ : ECGCಯಲ್ಲಿ ಹೂಡಿಕೆಗೆ ಸಚಿವ ಸಂಪುಟದಿಂದ ಅನುಮೋದನೆ‌

RELATED ARTICLES

Most Popular