ಚಂಡೀಗಢ : ಮುಖ್ಯಮಂತ್ರಿ ಹುದ್ದೆಯಿಂದ ಕಳಗೆ ಇಳಿಯುತ್ತಲೇ ಕಾಂಗ್ರೆಸ್ ವಿರುದ್ದ ಮುನಿಸಿಕೊಂಡಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ್ದಾರೆ. ಅಲ್ಲದೇ ಹೊಸ ಪಕ್ಷ ಬಿಜೆಪಿಯೊಂದಿಗೆ ಸೀಟು ಹಂಚಿಕೆ ಮಾಡಿಕೊಳ್ಳಲಿದೆ ಎಂದು ಅಮರಿಂದರ್ ಸಿಂಗ್ ಅವರು ಖಚಿತ ಪಡಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ತಮ್ಮ ಹೊಸ ಪಕ್ಷವು ಬಿಜೆಪಿಯೊಂದಿಗೆ ಸೀಟು ಹಂಚಿಕೆ ಒಪ್ಪಂದ ವನ್ನುಮಾಡಿಕೊಳ್ಳಲಿದೆ, ಆದರೆ ಪಕ್ಷದ ಹೆಸರನ್ನು ಇನ್ನೂ ನಿರ್ಧರಿಸಲಾಗಿಲ್ಲ. ನಾನು ಪಕ್ಷ ಕಟ್ಟುತ್ತಿದ್ದೇನೆ. ನನ್ನ ವಕೀಲರು ಅದರಲ್ಲಿ ಕೆಲಸ ಮಾಡುತ್ತಿದ್ದಾರೆ. ಚುನಾವಣಾ ಆಯೋಗ ಅದನ್ನು ಅನುಮೋದಿಸಿದ ನಂತರ ನಾನು ನಿಮಗೆ ಹೆಸರನ್ನು ಹೇಳಬಲ್ಲೆ. ನಾವು ಚಿಹ್ನೆಗಾಗಿ ವಿನಂತಿ ಮಾಡಿದ್ದೇವೆ ಎಂದಿದ್ದಾರೆ.
ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿದ್ದ ನವಜೋತ್ ಸಿಂಗ್ ಸಿಧು ನೇತೃತ್ವದ ಕಾಂಗ್ರೆಸ್ ಪಕ್ಷದ ಜೊತೆ ಮುನಿಸಿಕೊಂಡಿದ್ದ ಅಮರಿಂದರ್ ಸಿಂಗ್ ಅವರು, ಸೆಪ್ಟೆಂಬರ್ 18 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದೊದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು. ಪಂಜಾಬ್‌ನಲ್ಲಿ ಚರಂಜಿತ್ ಸಿಂಗ್ ಚನ್ನಿನೇತೃತ್ವದಲ್ಲಿ ನೂತನ ಸರಕಾರ ಜಾರಿಗೆ ಬಂದಿದೆ. ಚುನಾವಣೆಗೆ ಇನ್ನೂ ಕೇವಲ ನಾಲ್ಕು ತಿಂಗಳು ಇರುವ ಹೊತ್ತಲೇ ಅಮರಿಂದರ್ ಸಿಂಗ್ ಹೊಸ ಪಕ್ಷ ಘೋಷಣೆ ಮಾಡಿರೋದು ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗುವ ಸಾಧ್ಯತೆಯಿದೆ.
ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಹೊಸ ಪಕ್ಷ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳದ (ಎಸ್‌ಎಡಿ) ವಿಭಜನೆಯ ಬಣಗಳೊಂದಿಗೆ ಸೀಟು ಹೊಂದಾಣಿಕೆಯನ್ನು ಮಾಡಿಕೊಳ್ಳಲಿದೆ. ಸಾಕಷ್ಟು ಮಂದಿ ಕಾಂಗ್ರೆಸ್ ನಾಯಕರು ತನ್ನ ಜೊತೆಗೆ ಸಂಪಕ್ಷದಲ್ಲಿದ್ದಾರೆ. ಆದರೆ ಯಾರೆಲ್ಲಾ ಇದ್ದಾರೆ ಅನ್ನುವ ಕುರಿತು ನಿಮಗೆ ಹೇಳಲಾರೆ ಎಂದಿದ್ದಾರೆ.4
ಚುನಾವಣೆಯ ಅವಧಿಯಲ್ಲಿ ತಾವು ನೀಡಿದ್ದ ಎಲ್ಲಾ ಭರವಸೆಗಳ ಪೈಕಿ 92% ಈಡೇರಿಸಿದ್ದೇವೆ. ಸಚಿವರು ಕ್ಷುಲ್ಲಕ ಹೇಳಿಕೆ ನೀಡಿದ್ದಾರೆ. ನಾನು ಅವರನ್ನು ಹೆಸರಿಸಲು ಬಯಸುವುದಿಲ್ಲ, ಕಳೆದ ನಾಲ್ಕೂವರೆ ವರ್ಷಗಳಲ್ಲಿ ಸುಮಾರು ಒಂದು ಲಕ್ಷ ಕೋಟಿ ರೂಪಾಯಿಯನ್ನು ಉದ್ಯಮ ಹೂಡಿಕೆ ಮಾಡಿದ್ದೇವೆ. ಪ್ರನಾಳಿಕೆಯಲ್ಲಿ ಭರವಸೆ ನೀಡದಿದ್ದರೂ ಕೂಡ ಸರಕಾರ ಮಾಡಿದ ಎಲ್ಲಾ ಕಾಮಗಾರಿಗಳು ಹಾಗೂ ಅಭಿವೃದ್ದಿ ಕಾರ್ಯಗಳ ವಿವರಗಳ ಕುರಿತು ವಿವರಣೆಯನ್ನು ನೀಡಿದ್ದಾರೆ.
ಇದನ್ನೂ ಓದಿ : ಕರ್ನಾಟಕ ಬಿಟ್ಟು ದೆಹಲಿಗೆ ಬರಲಾರೆ : ಸೋನಿಯಾ ಆಹ್ವಾನ ತಿರಸ್ಕರಿಸಿದ ಸಿದ್ದರಾಮಯ್ಯ
ಇದನ್ನೂ ಓದಿ : ಪಂಜಾಬ್‌ನಲ್ಲಿ ಕಾಂಗ್ರೆಸ್ ಬಿಕ್ಕಟ್ಟು : ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ ?
( Amarinder Singh announces formation of new political party in Punjab )