ದೆಹಲಿ : ಕೃಷಿ ಕಾನೂನನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಕಾವು ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ ಎಂದು ಭಾವಿಸುವಾಗಲೇ ರೈತರು ಮತ್ತೆ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ ಗಾಜಿಪುರ ಗಡಿಯಲ್ಲಿ ರೈತರು ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ದೆಹಲಿ ಪೊಲೀಸರು ಗಾಜಿಪುರ ಗಡಿಯಲ್ಲಿ ಬ್ಯಾರಿಕೇಡ್ ಗಳನ್ನು ತೆಗೆದುಹಾಕಿದ ಬಗ್ಗೆ ಶುಕ್ರವಾರ ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಯುಧ್ವೀರ್ ಸಿಂಗ್, ಗಾಜಿಪುರ ಗಡಿಯಲ್ಲಿ ಪ್ರತಿಭಟನೆ ಇನ್ನೂ ಹೆಚ್ಚು ಹುರುಪಿನಿಂದ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ರಾಷ್ಟ್ರ ರಾಜಧಾನಿಯಲ್ಲಿ ಭೀಕರ ಅಪಘಾತ : ಮೂವರು ರೈತ ಮಹಿಳೆಯರ ಸಾವು
ಕೃಷಿ ಕಾನೂನುಗಳ ವಿರುದ್ಧದ ಶಾಂತಿಯುತವಾಗಿ ಪ್ರತಿಭಟನೆ ಮಾಡುವುದರಿಂದ ಸರ್ಕಾರ ನಮ್ಮ ಸಮಸ್ಯೆಯನ್ನು ಬಗೆಹರಿಸುವಂತೆ ಕಾಣುತ್ತಿಲ್ಲ. ನನ್ನ 40 ವರ್ಷಗಳ ಅನುಭವದಿಂದ ಹೇಳುತಿದ್ದೇನೆ, ಸರ್ಕಾರ ಒಂದು ನಿರ್ಧಾರಕ್ಕೆ ಬರುವ ಬದಲು ಅದನ್ನು (ಬಿಕ್ಕಟ್ಟನ್ನು) ಮತ್ತಷ್ಟು ವಿಸ್ತರಿಸಲು ಬಯಸುತ್ತಿದೆ ಎಂದು ನನಗೆ ಅನಿಸುತ್ತಿದೆ ಎಂದು ಶ್ರೀ ಸಿಂಗ್ ಹೇಳಿದರು.
ರೈತರು ಎಂದಿಗೂ ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಸಲು ಬಯಸುವುದಿಲ್ಲಾ. ಆದರೆ ಈ ಸರ್ಕಾರ ರೈತರ ಸಮಸ್ಯೆಗೆ ಸ್ಪಂಧಿಸುತ್ತಿಲ್ಲ. ಜನವರಿ 26 ರ ಘಟನೆಯ ನಂತರ ದೆಹಲಿ ಪೊಲೀಸರು ಈ ಬ್ಯಾರಿಕೇಡ್ ಗಳನ್ನು ಹಾಕಿದ್ದರು. ನಂತರ ಸುಪ್ರೀಂ ಕೋರ್ಟ್ ಆದೇಶದ ನಂತರ, ಬ್ಯಾರಿಗೇಟ್ ಅನ್ನು ಪೋಲಿಸರು ತೆಗೆದು ಹಾಕಿದ್ದಾರೆ.
ಇದನ್ನೂ ಓದಿ: Amarinder Singh : ಹೊಸ ಪಕ್ಷ ಕಟ್ಟಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ : ಬಿಜೆಪಿ ಜೊತೆ ಸೀಟು ಹಂಚಿಕೆ
(Continued farmers protest on Ghazipur border)