ನವೆದೆಹಲಿ : ನವೆಂಬರ್ ತಿಂಗಳಲ್ಲಿ ನಡೆಯಲಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ( National Defence Academy ) ಪರೀಕ್ಷೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೂ ಅವಕಾಶ ನೀಡಲೇಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಮುಂದಿನ ವರ್ಷದ ಮೇ ತಿಂಗಳಲ್ಲಿ ಮಹಿಳೆಯರಿಗೆ ಎನ್ಡಿಎ (NDA) ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವಾಲಯ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿತ್ತು. ಇದೀಗ ಒಂದು ದಿನದ ಬಳಿಕವೇ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದೆ.
ಇದನ್ನೂ ಓದಿ: PM Modi to US : ಸೆ.23ಕ್ಕೆ ಮೋದಿ ಅಮೇರಿಕಾ ಭೇಟಿ : ಜೋ ಬೈಡನ್ ಜೊತೆ ಮಹತ್ವದ ಮಾತುಕತೆ
ಮಹಿಳೆಯರಿಗೆ ಈ ವರ್ಷದಿಂದಲೇ ಎನ್ಡಿಎ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಬೇಕು. ಇದನ್ನು ಒಂದು ವರ್ಷಗಳ ಕಾಲ ಮುಂದುವರಿಸಲು ಸಾಧ್ಯವೇ ಇಲ್ಲ. ನವೆಂಬರ್ನಲ್ಲಿ ನಡೆಯಲಿರುವ ಪರೀಕ್ಷೆಗೆ ಪರಿಷ್ಕೃತ ಅಧಿಸೂಚನೆ ಹೊರಡಿಸಬೇಕು ಎಂದು ಸುಪ್ರೀಂ ಕೋರ್ಟ್ ಖಡಕ್ ಸೂಚನೆ ನೀಡಿದೆ.
ಇದನ್ನೂ ಓದಿ: ಕೋಲಿನಲ್ಲಿ ಹೊಡೆದು ಮಗಳ ಹತ್ಯೆ ಮಾಡಿದ ತಂದೆ ! ಕಾರಣ ಕೇಳಿದ್ರೆ ಶಾಕ್ ಆಗ್ತೀರಿ
(The Supreme Court issued by Warning to allow women to take NDA exams)