ಮಂಗಳವಾರ, ಏಪ್ರಿಲ್ 29, 2025
HomeNationalಭಾರೀ ಮಳೆಗೂ ಜಗ್ಗದ ಅನ್ನದಾತರು : ಮಳೆಯ ನೀರಲ್ಲೇ ಕುಳಿತು ರೈತರ ಪ್ರತಿಭಟನೆ

ಭಾರೀ ಮಳೆಗೂ ಜಗ್ಗದ ಅನ್ನದಾತರು : ಮಳೆಯ ನೀರಲ್ಲೇ ಕುಳಿತು ರೈತರ ಪ್ರತಿಭಟನೆ

- Advertisement -

ನವದೆಹಲಿ : ಸಾಮಾನ್ಯವಾಗಿ ಸ್ವಚ್ಚವಾದ ಜಾಗ, ಐಶಾರಾಮಿ ಶಾಮಿಯಾನದ ಅಡಿಯಲ್ಲಿ ಕೂತು ಪ್ರತಿಭಟನೆ ಮಾಡುವವರನ್ನು ನೋಡಿದ್ದೇವೆ. ಆದರೆ ಅನ್ನದಾತರು ದೆಹಲಿಯ ಭಾರಿ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಇದರ ನಡುವೆ ಭಾರತೀಯ ಕಿಸಾನ್‌ ಯೂನಿಯನ್‌ ನಾಯಕ ರಾಕೇಶ್ ಟಿಕಾಯತ್‌ ಅವರು ಬೆಂಬಲಿಗರೊಂದಿಗೆ ಗಾಜಿಪುರದಲ್ಲಿ ಜಲಾವೃತವಾದ ಫ್ಲೈ ಓವರ್ ಬಳಿ ಮಳೆ ನೀರಿನಲ್ಲಿ ಕುಳಿತು ಧರಣಿ ನಡೆಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ರಾಜಧಾನಿ ವರುಣನ ಆರ್ಭಟ ! ಇಂದಿರಾಗಾಂಧಿ ವಿಮಾನ ನಿಲ್ದಾಣದ ಸ್ಥಿತಿ ಹೇಗಾಗಿದೆ ಗೊತ್ತಾ?

ಶನಿವಾರ ಸುರಿದ ಮಳೆಯಿಂದಾಗಿ ದೆಹಲಿ -ಉತ್ತರ ಪ್ರದೇಶ ಗಡಿ ಪ್ರದೇಶದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ಟೆಂಟ್‌ಗಳು ಹಾನಿಗೊಳಗಾಗಿವೆ. ರಾಕೇಶ್ ಟಿಕಾಯತ್‌ ಅವರು ನೀರು ತುಂಬಿರುವ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಮಳೆ ನೀರು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಇದರ ಗಮನ ಹರಿಸುತ್ತಿಲ್ಲ’ ಎಂದು ಬಿಕೆಯುನ ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ನಡೆದಿದೆ ಬೃಹತ್‌ ಲಸಿಕಾ ಅಭಿಯಾನ : ಇದುವರೆಗೆ ಎಷ್ಟು ಜನರಿಗೆ ಲಸಿಕೆ ನೀಡಲಾಗಿದೆ ಗೊತ್ತಾ ?

ಈಗ ಪ್ರತಿಭಟಿಸುತ್ತಿರುವ ರೈತರು ಎಲ್ಲಾ ಮೂರು ಋತುಗಳನ್ನು (ಚಳಿಗಾಲ, ಬೇಸಿಗೆ ಮತ್ತು ಮಳೆ) ನೋಡಿದ್ದಾರೆ. ನಾವು ಈಗ ಯಾವುದಕ್ಕೂ ಹೆದರುವುದಿಲ್ಲ’ ಮಲಿಕ್ ಹೇಳಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣ, ಪಂಜಾಬ್‌, ಉತ್ತರಪ್ರದೇಶ ಸೇರಿದಂತೆ ಹಲವು ರಾಜ್ಯಗಳ ರೈತರು ದೆಹಲಿಯ ಗಡಿ ಪ್ರದೇಶಗಳಲ್ಲಿ ಕಳೆದ ನವೆಂಬರ್‌ನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರೊಂದಿಗೆ ಕೇಂದ್ರ ಸರ್ಕಾರ ಈಗಾಗಲೇ 11 ಬಾರಿ ಮಾತುಕತೆ ನಡೆಸಿದ್ದು, ಯಾವುದೇ ಪ್ರಯೋಜನವಾಗಿಲ್ಲ.

(Severe rainfall: farmers protest in rainy water)

RELATED ARTICLES

Most Popular