ಚಿನ್ನದ ಕಳ್ಳಸಾಗಣೆ : ಇಡಿ ವಿರುದ್ಧ ಕ್ರೈಂ ಬ್ರ್ಯಾಂಚ್ ತನಿಖೆ, ಸುಪ್ರೀಂನಲ್ಲಿಂದು ವಿಚಾರಣೆ

ತಿರುವನಂತಪುರಂ : ಕೇರಳದಲ್ಲಿ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿರುದ್ಧ ಕ್ರೈಂ ಬ್ರಾಂಚ್ ತನಿಖೆ ಮುಂದಾಗಿದೆ. ಹೈಕೋರ್ಟ್‌ ಆದೇಶದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ತನಿಖೆಗೆ ತಡೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆ ನಡೆಸಲಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿದ್ದ ಸ್ವಪ್ನಾ ಸುರೇಶ್ ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್‌ ಜೊತೆ ಪರಿಚಯವಿತ್ತು ಅನ್ನೋ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ವಿರುದ್ದ ಸಾಕ್ಷ್ಯ ಹೇಳುವಂತೆ ಆರೋಪಿ ಸ್ವಪ್ನಾ ಸುರೇಶ್‌ ಮತ್ತು ಸಂದೀಪ್ ನಾಯರ್ ಮೇಲೆ ಒತ್ತಡ ಹೇರಲಾಗಿತ್ತು ಎಂದು ಆರೋಪಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಕ್ರೈಂ ಬ್ರ್ಯಾಂಚ್‌ ಜಾರಿನಿರ್ದೇಶನಾಲಯ ( ಇಡಿ) ಅಧಿಕಾರಿಗಳ ವಿರುದ್ದ ತನಿಖೆ ಮುಂದಾಗಿತ್ತು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಕ್ರೈಂ ಬ್ರಾಂಚ್ ವಿಚಾರಣೆ ನಡೆಸಬೇಕೇ ಎಂಬುದನ್ನು ವಿಚಾರಣಾ ನ್ಯಾಯಾಲಯ ನಿರ್ಧರಿಸಬಹುದು ಎಂಬ ಹೈಕೋರ್ಟ್ ಆದೇಶ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದು, ಸುಪ್ರೀಂ ಕೋರ್ಟ್‌ ಇಂದು ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. ಒಂದೊಮ್ಮೆ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದ್ರೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕ್ರೈಂ ಬ್ರ್ಯಾಂಚ್‌ ಅಧಿಕಾರಿಗಳ ತನಿಖೆಗೆ ಸಹಕರಿಸಲೇ ಬೇಕಾದ ಅನಿವಾರ್ಯತೆಗೆ ಸಿಲುಕಲಿದ್ದಾರೆ.

ಇದನ್ನೂ ಓದಿ :‌ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ : ಸ್ವಪ್ನಾ ಸುರೇಶ್ ಲಾಕರ್ ನಲ್ಲಿತ್ತು ಬರೋಬ್ಬರಿ 38 ಕೋಟಿ !

ಮೇಲೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಸಾಕ್ಷ್ಯ ಹೇಳುವಂತೆ ಒತ್ತಡ ಹೇರಲಾಗಿದೆ ಎಂದು ಆರೋಪಿಸಲಾಗಿತ್ತು. ತರುವಾಯ, ಅಪರಾಧ ವಿಭಾಗವು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ತನಿಖೆಯನ್ನು ಘೋಷಿಸಿತು.

ಇದನ್ನೂ ಓದಿ : ಕೇರಳ ಸಿಎಂ ಗೆ ಆಪತ್ತು ತಂದ ಸ್ವಪ್ನ ಸುಂದರಿ : ಅವಿಶ್ವಾಸ ಗೊತ್ತುವಳಿಗೆ ಮುಂದಾದ ಯುಡಿಎಫ್

( Supreme Court to hear criminal branch probe against ED in Kerala Swapna Suresh gold smuggling case )

Comments are closed.