Kerala : ಕೇರಳದಲ್ಲಿ ವರುಣನ ಆರ್ಭಟಕ್ಕೆ ಕೊಚ್ಚಿ ಹೋದ ಮನೆ : ಸಾವಿನ ಸಂಖ್ಯೆ 26 ಏರಿಕೆ

ಕೇರಳ : ಮಳೆಯ ಅಬ್ಬರಕ್ಕೆ ದೇವರನಾಡು ತತ್ತರಿಸಿ ಹೋಗಿದೆ. ಕೇರಳದಲ್ಲಿ ಕಳೆದ ಎರಡು ದಿನಗಳ ಅವಧಿಯಲ್ಲಿ ಸುರಿದ ಮಳೆಯಿಂದಾಗಿ 26 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗುದ್ದಾರೆ. ಇಡುಕ್ಕಿ ಹಾಗೂ ಕೊಟ್ಟಾಯಂನಲ್ಲಿ ನಡೆದ ಭೂಕುಸಿತದಿಂದಾಗಿ ಸಾಕಷ್ಟು ಮಂದಿ ನಿರಾಶ್ರಿತರಾಗಿದ್ದಾರೆ. ಅದ್ರಲ್ಲೂ ಕೇರಳ ಕೊಟ್ಟಾಯಂ ಜಿಲ್ಲೆಯ ಮುಂಡಾಕಾಯಂನಲ್ಲಿರುವ ಮನೆಯೊಂದು ಪ್ರವಾಯಕ್ಕೆ ಕೊಚ್ಚಿಕೊಂಡು ಹೋಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮಳೆಯ ಹಿಂಭಾಗದಲ್ಲಿ ಭಾರಿ ಮಳೆಯ ಹಿಂಭಾಗದಲ್ಲಿ ಅಬ್ಬರದಿಂದ ಮಳೆ ಹರಿಯುತ್ತಿತ್ತು. ನೀರಿನ ಆರ್ಭಟಕ್ಕೆ ಮನೆಯ ಹಿಂಭಾಗ ಕುಸಿತವಾಗಿದ್ದು, ನಂತರದಲ್ಲಿ ಒಂದು ಅಂತಸ್ತಿನ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಜನರ ಕಣ್ಣೆದುರಲ್ಲೇ ಈ ಘಟನೆ ನಡೆದಿದ್ದರೂ ಕೂಡ ಏನೂ ಮಾಡಲಾಗದ ಸ್ಥಿತಿಯಲ್ಲಿದ್ದಾರೆ.

ಇದನ್ನೂ ಓದಿ: Heavy rain : ಕೇರಳದಲ್ಲಿ ವರುಣನ ರುಧ್ರ ನರ್ತನ : ಸಶಸ್ತ್ರ ಪಡೆಗಳ ಸಹಾಯ ಕೋರಿದ ಸಿಎಂ ವಿಜಯನ್

ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಜನ ಜೀವನದ ಮೇಲೆ ವ್ಯತಿರಿಕ್ತವಾದ ಪರಿಣಾಮವನ್ನುಂಟು ಮಾಡಿದೆ. ಭೂಕುಸಿತದಲ್ಲಿ ಈಗಾಗಲೇ 26 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗ ಆತಂಕ ಎದುರಾಘಿದೆ. ಇನ್ನೊಂದೆಡೆಯಲ್ಲಿ ಹಲವಾರು ಜನರು ಮನೆಯನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಭೂಕುಸಿತ (landslide) ಮತ್ತು ನದಿಗಳಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟವು ಜನರು, ಮನೆಗಳು ಮತ್ತು ವ್ಯವಹಾರಗಳನ್ನು ಕೊಚ್ಚಿಕೊಂಡು ಹೋಗಿದೆ, ಇದರ ಪರಿಣಾಮವಾಗಿ ದಕ್ಷಿಣ ರಾಜ್ಯದ ಮಳೆ ಹಾನಿಗೊಳಗಾದ ಪ್ರದೇಶಗಳಲ್ಲಿ ನೂರಾರು ಕೋಟಿ ಬೆಳೆ, ಸೊತ್ತು ಹಾನಿಯಾಗಿದೆ.

ಕೇರಳದ ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲೆಗಳು ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸುತ್ತಿವೆ. ಈಗಾಗಲೇ ಕೇರಳದಲ್ಲಿ ಸಾವಿನ ಸಂಖ್ಯೆ ಏರುತ್ತಿದೆ. ಜೊತೆಗೆ ಭೂಕುಸಿತ ಉಂಟಾಗುತ್ತಿರುವುದು ಆತಂಕವನ್ನು ಮೂಡಿಸಿದೆ. ಈಗಾಗಲೇ ಕೇಂದ್ರ ರಕ್ಷಣಾ ತಂಡ ಕೇರಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದೆ. ಮಳೆಯಿಂದ ನಿರಾಶ್ರಿತರಾದವರಿಗೆ ಪರಿಹಾರ ಕೇಂದ್ರವನ್ನು ಆರಂಭಿಸಲಾಗಿದೆ. ಅಧಿಕಾರಿಗಳು ಸದಾ ಅಲರ್ಟ್‌ ಆಗಿರುವಂತೆ ರಾಜ್ಯ ಸರಕಾರ ಸೂಚನೆಯನ್ನು ಕೊಟ್ಟಿದೆ. ಗುಡ್ಡ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಭಾರಿ ಮಳೆಯಿಂದ ಜರ್ಜರಿತವಾಗಿರುವ ಕೇರಳದ ದಕ್ಷಿಣ ಮತ್ತು ಕೇಂದ್ರ ಭಾಗಗಳಲ್ಲಿ NDRF ಮತ್ತು ರಕ್ಷಣಾ ಪಡೆಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆನಡೆಸುತ್ತಿವೆ.

ದೇವರನಾಡಿನಲ್ಲಿನ ಜನರು ಕಳೆದ ಬಾರಿಯಂತೆಯೇ ಈ ಬಾರಿಯೂ ಕೂಡ ಮಳೆಯಿಂದ ತತ್ತರಿಸಿ ಹೋಗಿದ್ದಾರೆ. ಒಂದೆಡೆಯಲ್ಲಿ ಮನೆಗಳು ನೀರಿನ ರಭಸಕ್ಕೆ ಕುಸಿದು ಬೀಳುತ್ತಿದ್ರೆ, ಇನ್ನೊಂದೆಡೆಯಲ್ಲಿ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಮಳೆಯಿಂದ ತಮ್ಮವರನ್ನು ಕಳೆದುಕೊಂಡವರ ಆಕ್ರಂಧನ ಮುಗಿಲು ಮುಟ್ಟಿದೆ. ರಾಜ್ಯ ಸರಕಾರ ಸಮಾರೋಪಾದಿಯಲ್ಲಿ ಪರಿಹಾರ ಕಾರ್ಯವನ್ನು ಕೈಗೊಂಡಿದೆ.

ಇದನ್ನೂ ಓದಿ : Rain Red Alert : ಕೇರಳದಲ್ಲಿ ಭಾರಿ ಮಳೆ ರೆಡ್‌ ಅಲರ್ಟ್‌ : 3 ದಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದಾಗಿ ಕೇರಳದಲ್ಲಿ ಮಳೆ ಆರ್ಭಟಿಸುತ್ತಿದ್ದ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಇನ್ನೊಂದೆಡೆಯಲ್ಲಿ ಕೇರಳದ ಹಲವು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆಯೂ ಸೂಚಿಸಲಾಗಿದೆ.

(House washed away by rain in Kerala: Death toll rises to 26)

Comments are closed.