ಮಂಗಳೂರು : ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಾಣಿಕೆ ಪ್ರಕರಣ ಹೆಚ್ಚುತ್ತಲೇ ಇದೆ. ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸೋ ಸಲುವಾಗಿ ಖದೀಮರು ನಾನಾ ಕಳ್ಳ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಇಲ್ಲೊಬ್ಬ ವ್ಯಕ್ತಿ ಚಿನ್ನವನ್ನು ಬೋಲ್ಟ್‌ನೊಳಗೆ ಅಡಗಿಸಿಟ್ಟು ಸಾಗಾಟಕ್ಕೆ ಯತ್ನಿಸಿ ಮಂಗಳೂರಲ್ಲಿ ಬಂಧಿಯಾಗಿದ್ದಾನೆ.
ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸ್ಕೇಟಿಂಗ್ ಚಕ್ರದ ಬೋಲ್ಟ್‌ನೊಳಗೆ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ 16 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನ ಗಡಿ ಪ್ರವೇಶಿಸಿದ್ದಕ್ಕೆ 8 ವರ್ಷ ಜೈಲು ಶಿಕ್ಷೆ : ಕೊನೆಗೂ ಬಂಧಮುಕ್ತರಾದ ಇಬ್ಬರು ಭಾರತೀಯರು
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮುಳಿಯಾರುವಿನ ಮಹಮ್ಮದ್ ನಿವಾಸ್ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿರುವಾತ. ಈ ಅರೋಪಿ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಮಂಗಳವಾರ ಬೆಳಿಗ್ಗೆ ಬಂದಿಳಿದಿದ್ದ. ಈ ಸಂದರ್ಭದಲ್ಲಿ ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಸ್ಕೇಟಿಂಗ್ ಬೋರ್ಡ್ ಪತ್ತೆಯಾಗಿದೆ.
ಅದನ್ನು ಪರಿಶೀಲನೆ ನಡೆಸಿದ ವೇಳೆಯಲ್ಲಿ ಸ್ಕೇಟಿಂಗ್ನ ವ್ಹೀಲ್ ಬೋಲ್ಟ್ ಹಾಗೂ ಚಕ್ರಕ್ಕೆ ಸಂಪರ್ಕ ಕಲ್ಪಿಸುವ ರಾಡ್ನಲ್ಲಿ ಚಿನ್ನವನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿದೆ. ಈತನಿಂದ 335 ಗ್ರಾಂ. ತೂಕದ 16,21,400 ರೂ. ಮೌಲ್ಯದ ಚಿನ್ನವನ್ನು ವಶಪಡಿಸಲಾಗಿದೆ. ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮಹಮ್ಮದ್ ನಿವಾಸ್‌ನನ್ನು ವಶಕ್ಕೆ ತೆಗೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: High Alert : ಕೇರಳಕ್ಕೆ ಶ್ರೀಲಂಕಾ ಉಗ್ರರು ನುಸುಳಿರುವ ಶಂಕೆ : ಕರಾವಳಿಯಾದ್ಯಂತ ಹೈ ಅಲರ್ಟ್
(Gold trafficking in Bolt A person has Arrested in Manglore Airport)