ಕಾಶ್ಮೀರ : ಜಮ್ಮು ಕಾಶ್ಮೀರದಲ್ಲಿ ಇತ್ತೀಚಿನ ದಿನದಲ್ಲಿ ಉಗ್ರರ ದಾಳಿ ಹೆಚ್ಚುತ್ತಿದೆ. ಇದರ ಜೊತೆ ಹತ್ಯೆ ಪ್ರಕರಣಗಳು ಕೂಡ ಮೀತಿ ಮೀರುತ್ತಿದೆ. ಮತ್ತೇ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಮಂಜ್ಗಾಮ್ ಪ್ರದೇಶದಲ್ಲಿ ಶಂಕಿತ ಉಗ್ರರು ಪೊಲೀಸರ ಮೇಲೆ ಗುಂಡು ಹಾರಿಸಿದ ನಂತರ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರದ ಮೆಥಾನ್ ನಲ್ಲಿ ಶನಿವಾರ ಬೆಳಿಗ್ಗೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಮತ್ತೊಂದು ಎನ್ ಕೌಂಟರ್ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಶ್ರೀನಗರದ ಮೆಥಾನ್ ಪ್ರದೇಶದಲ್ಲಿ ಎನ್ ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಸಿಆರ್ ಪಿಎಫ್ (CRPF) ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹೆಚ್ಚಿನ ವಿವರಗಳು ಅನುಸರಿಸುತ್ತವೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಕೆಂಪು ರಾಷ್ಟ್ರದ 200 ಸೈನಿಕರನ್ನು ತಡೆದ ಭಾರತೀಯ ಯೋಧರು…!
ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶವನ್ನು ಸುತ್ತುವರಿದ ನಂತರ ಮತ್ತು ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆ ಯನ್ನು ಪ್ರಾರಂಭಿಸಿದ ನಂತರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆಯಿತು.
ಭಯೋತ್ಪಾದಕರು ಅಡಗಿದ್ದ ಸ್ಥಳದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಮಾಡುತ್ತಿದ್ದಂತೆ ಉಗ್ರರು ದಾಳಿ ನಡೆಸಿದರು. ಈ ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂಧಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: PM CARES : ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಕೇಂದ್ರದಿಂದ 10 ಲಕ್ಷ ರೂ ಸ್ಟೈಫಂಡ್
(Militants attack Kashmir: Two policemen injured)