PM Digital Health Mission : ಜನಸಾಮಾನ್ಯರಿಗೆ ಸಿಹಿಸುದ್ದಿ ಕೊಟ್ಟ ಕೇಂದ್ರ : ಪಿಎಂ ಡಿಜಿಟಲ್‌ ಹೆಲ್ತ್‌ ಮಿಷನ್‌ ಯೋಜನೆಗೆ ಮೋದಿ ಚಾಲನೆ

ನವದೆಹಲಿ : ಜನಸಾಮಾನ್ಯರಿಗೆ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಈಗಾಗಲೇ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ತಂದಿದೆ. ಇದೀಗ ಜನರ ಆರೋಗ್ಯದ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ಗುಡ್‌ನ್ಯೂಸ್‌ ಕೊಟ್ಟಿದೆ. ಕೇಂದ್ರ ಸರಕಾರ ಪ್ರಧಾನ ಮಂತ್ರಿ ಡಿಜಿಟಲ್‌ ಹೆಲ್ತ್‌ ಮಿಷನ್‌ ಯೋಜನೆ ಜಾರಿಗೆ ತಂದಿದ್ದು, ಪ್ರಧಾನಿ ಮೋದಿ ಇಂದು ಚಾಲನೆ ನೀಡಲಿದ್ದಾರೆ.

ಜನರ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಅಲ್ಲದೇ ಚಿಕಿತ್ಸೆ ನಿಡುವ ಸಂಧರ್ಭದಲ್ಲಿ ಸಹಾಯಕ ವಾಗುವಂತೆ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತರುತ್ತಿದೆ. ದೇಶದ ಪ್ರತಿ ಪ್ರಜೆಗೂ ಅವರ ಆರೋಗ್ಯದ ಸಂಪೂರ್ಣ ಮಾಹಿತಿ ಒಳಗೊಂಡ ಡಿಜಿಟಲ್‌ ಕಾರ್ಡ್‌ ವಿತರಿಸುವ ಯೋಜನೆಯಾಗಿದೆ.

ಇದನ್ನೂ ಓದಿ: Mann Ki Baat :ಉಡುಗೊರೆ ಹರಾಜಿನ ಆದಾಯವನ್ನು ನಮಾಮಿ ಗಂಗೆಗೆ ಮೀಸಲಿಟ್ಟ ನಮೋ : ಮನಕೀ ಬಾತ್‌ನಲ್ಲಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಈಗಾಗಲೇ ಪ್ರಾಯೋಗಿಕ ಹಂತದಲ್ಲಿ 6 ಕೇಂದ್ರಾಡಳಿತ ಪ್ರದೇಶಗಳಲ್ಲಿ ಯೋಜನೆ ಜಾರಿಯಲ್ಲಿದ್ದು, ದೇಶಾದ್ಯಂತ ವಿಸ್ತರಿಸಲಾಗುವುದು.. ದೇಶದ ಪ್ರತಿ ಪ್ರಜೆಗೂ ಗುಣಮಟ್ಟದ, ಸುಲಲಿತ, ಸಮಗ್ರ, ಅಗ್ಗದ ಮತ್ತು ಸುರಕ್ಷಿತ ಆರೋಗ್ಯ ಸೇವೆ ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.

ಇದನ್ನೂ ಓದಿ: ಕೋವಿಶೀಲ್ಡ್ ಲಸಿಕೆ ಪಡೆದ ಭಾರತೀಯರಿಗೆ ಗುಡ್ ನ್ಯೂಸ್ ಕೊಟ್ಟ ಇಟಲಿ

ಪ್ರಧಾನಮಂತ್ರಿ ಡಿಜಿಟಲ್‌ ಆರೋಗ್ಯ ಮಿಷನ್‌ ಯೋಜನೆಯಡಿ ದೇಶದ ಪ್ರತಿಯೊಬ್ಬರಿಗೂ ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ರೀತಿ ವಿಶೇಷ ಗುರುತಿನ ಚೀಟಿ ವಿತರಿಸಲಾಗುತ್ತದೆ. ಈ ಗುರುತಿನ ಚೀಟಿಯು ವ್ಯಕ್ತಿಯೊಬ್ಬರ ಆರೋಗ್ಯ ಕುರಿತಾದ ಮಾಹಿತಿ ಒಳಗೊಂಡಿರಲಿದೆ.

(PM Digital Health Mission)

Comments are closed.