33 ಜನರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬಂಧಿತ 23 ಮಂದಿ ಬೇರೆ ಬೇರೆ ಪಕ್ಷದ ರಾಜಕಾರಣಿಗಳು !

ಥಾಣೆ : ಅಪ್ರಾಪ್ತ ಬಾಲಕಿಯೋರ್ವಳ ಮೇಲೆ 33 ಜನರು ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ಥಾಣೆಯ ಡೊಂಬಿವಿಲಿ ಪ್ರದೇಶದಲ್ಲಿ ನೆಡದಿದೆ.

ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚುತ್ತಿದೆ. ಅದ್ರಲ್ಲೂ ಅಪ್ರಾಪ್ತ ಬಾಲಕಿಯರ ಮೇಲೆಯೇ ಕಾಮುಕರು ದೌರ್ಜನ್ಯ ಎಸಗುತ್ತಿದ್ದಾರೆ. ಇದೀಗ ಮಹಾರಾಷ್ಟ್ರ ದಲ್ಲಿ ನಾಗರೀಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ನಡೆದಿದೆ.

ಡೊಂಬಿವಿಲಿಯ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಯುವಕನ ಜೊತೆ ಅಕ್ರಮ ಸಂಬಂಧವಿತ್ತು. ಆಕೆ ಆತನೊಂದಿಗೆ ಇರುವ ಅಶ್ಲೀಲ ವಿಡಿಯೋವನ್ನು ಶೂಟ್‌ ಮಾಡಿಕೊಂಡಿದ್ದ ಕಾಮುಕರು, ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಇದನ್ನು ಬಳಸಿಕೊಂಡು ಹೆದರಿಸುತ್ತಾ ಕಳೆದ 9 ತಿಂಗಳಿಂದ ಕಾಮುಕರು ಈ ದುಷ್ಕೃತ್ಯ ನಡೆಸುತ್ತಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೋಲಿಸರು 23 ಜನರನ್ನು ಬಂಧಿಸಿದ್ದಾರೆ.

ಉಳಿದಂತೆ ಇನ್ನು 10 ಜನರ ಪತ್ತೆಗೆ ಬಲೆ ಬೀಸಿದ್ದಾರೆ. ಕಾಮುಕರೆಲ್ಲಾ ಹಲವು ರಾಜಕೀಯ ಪಕ್ಷಗಳಿಗೆ ಸೇರಿದವರಾಗಿದ್ದಾರೆ ಎಂದು ಪೊಲೀಸರ ತನಿಖೆಯ ವೇಳೆಯಲ್ಲಿ ತಿಳಿದು ಬಂದಿದ್ದು, ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ : ಕೊರೊನಾ ಸೋಂಕಿಗೆ ಪತಿ ಸಾವು : ಮಗಳನ್ನು ನೇಣಿಗೇರಿಸಿ, ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ !

ಇದನ್ನೂ ಓದಿ : ಹೈಟೆಕ್‌ ವೇಶ್ಯಾವಾಟಿಕೆ ಜಾಲ ಬಯಲು : ಸುರಂಗದಲ್ಲಿ ಅವಿತಿದ್ದರು ಸುಂದರಿಯರು

( 33 Pesons rape of a minor girl : 23 detained party politicians !)

Comments are closed.