Navjot Singh Sidhu : ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನವಜೋತ್‌ ಸಿಂಗ್‌ ಸಿದ್ದು ರಾಜೀನಾಮೆ

ಚಂಡೀಗಢ : ಪಂಜಾಬ್‌ ಹೊಸ ಸಿಎಂ ನೇಮಕವಾದ ಬೆನ್ನಲ್ಲೇ ಪಂಜಾಬ್‌ ಕಾಂಗ್ರೆಸ್‌ನಲ್ಲಿ ತಿಕ್ಕಾಟ ಜೋರಾಗಿದೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಮಾಜಿ ಸಿಎಂ ಅಮರೀಂದರ್‌ ಸಿಂಗ್‌ ಸೋನಿಯಾ ಭೇಟಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಅಮರೀಂದರ್‌ ಸಿಂಗ್‌ ಹಾಗೂ ನವಜ್ಯೋತ ಸಿಂಗ್‌ ಸಿದ್ದು ನಡುವೆ ಗುದ್ದಾಟ ನಡೆಯುತ್ತಿತ್ತು. ಇದೇ ಕಾರಣಕ್ಕೆ ಎಐಸಿಸಿ ಪಂಜಾಬ್‌ನಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಿದೆ. ಆದರೆ ಹೊಸ ಸಿಎಂ ಜೊತೆಯೂ ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷರಾಗಿರುವ ನವಜ್ಯೋತ್‌ ಸಿಂಗ್‌ ಸಿದ್ದು ಅವರು ಮುನಿಸಿಕೊಂಡಿದ್ದಾರೆ. ಅಂತಿಮವಾಗಿ ಸಿದ್ದು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆಯಷ್ಟೆ ಸಿದ್ದು ಪಂಜಾಬ್‌ ಕಾಂಗ್ರೆಸ್‌ನ ಚುಕ್ಕಾಣಿ ಹಿಡಿದಿದ್ದರು. ಆದ್ರೀಗ ತಮ್ಮ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಅವರಿಗೆ ರವಾನಿಸಿದ್ದಾರೆ. ಸಿದ್ದು ಅವರು ತಮ್ಮ ರಾಜೀನಾಮೆ ಪತ್ರವನ್ನು ಟ್ವೀಟರ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಆದರೆ ಕಾಂಗ್ರೆಸ್‌ನಲ್ಲಿ ನನ್ನ ಸೇವೆಯನ್ನು ಮುಂದುವರಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಕೊನೆಗೂ ಕಾಂಗ್ರೆಸ್ ಕೈ ಹಿಡಿದ ಕನ್ನಯ್ಯ ಕುಮಾರ್ ಮತ್ತು ಜಿಗ್ನೇಶ್ ಮೇವಾನಿ

ಇದನ್ನೂ ಓದಿ : ಪಂಜಾಬ್‌ನಲ್ಲಿ ಕಾಂಗ್ರೆಸ್‌ ಬಿಕ್ಕಟ್ಟು : ಸಿಎಂ ಅಮರಿಂದರ್‌ ಸಿಂಗ್‌ ರಾಜೀನಾಮೆ ?

( Navjot Singh Sidhu resigns as president of Punjab Congress Committee )

Comments are closed.