Petrol and Diesel Price : ಪೆಟ್ರೋಲ್, ಡೀಸೆಲ್ ಬೆಲೆ ಶೀಘ್ರದಲ್ಲೇ ಇಳಿಕೆ : ಕೇಂದ್ರ ಸರಕಾರದ ಅಭಿಪ್ರಾಯವೇನು ಗೊತ್ತಾ ?

ನವದೆಹಲಿ : ಕಳೆದ ಕೆಲವು ದಿನಗಳಿಂದಲೂ ದೇಶದಲ್ಲಿ ತೈಲ ಬೆಲೆಯಲ್ಲಿ ಏರಿಕೆಯನ್ನು ಕಾಣುತ್ತಿದೆ. ದೇಶದಲ್ಲಿ ದಿನೇ ದಿನೇ ಪೆಟ್ರೋಲ್‌, ಡಿಸೇಲ್‌ ಬೆಲೆಯಲ್ಲಿ ದಾಖಲೆ ಯನ್ನು ಬರೆಯುತ್ತಿದೆ. ಆದರೆ ದೇಶದಲ್ಲಿ ತೈಲ ಬೆಲೆ ಸದ್ಯಕ್ಕೆ ಇಳಿಕೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇನ್ನೊಂದೆಡೆ ರಾಜ್ಯ, ಕೇಂದ್ರ ಸರಕಾರಗಳು ತೆರಿಗೆ ಕಡಿತಕ್ಕೆ ಮನಸ್ಸು ಮಾಡುತ್ತಿಲ್ಲ.

ತೈಲಗಳ ಪೂರೈಕೆ ಮತ್ತು ಬೇಡಿಕೆಯ ವಿಚಾರದಲ್ಲಿ ಕೇಂದ್ರ ಸರ್ಕಾರವು ಹಲವಾರು ತೈಲ-ರಫ್ತು ಮಾಡುವ ದೇಶಗಳೊಂದಿಗೆ ಮಾತುಕತೆ ನಡೆಸುತ್ತಿದೆ ಆದರೆ ಬೆಲೆಯಲ್ಲಿ ತಕ್ಷಣದ ಪರಿಹಾರದ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಭಾನುವಾರ, ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ 35 ಪೈಸೆ ಹೆಚ್ಚಿಸಲಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ 105.84 ರಷ್ಟಿದ್ದರೆ ಡೀಸೆಲ್ ಬೆಲೆ ರೂ 94.57 ಆಗಿದೆ. ಮುಂಬೈನಲ್ಲಿ, ಪೆಟ್ರೋಲ್ ಪ್ರಸ್ತುತ 111.77 ರೂ., ಡೀಸೆಲ್ 102.52 ರೂ.ಗೆ ಮಾರಾಟವಾಗುತ್ತಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ವೆಬ್‌ಸೈಟ್‌ನಲ್ಲಿ ಮಾಹಿತಿ ಲಭ್ಯವಾಗಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇತ್ತೀಚೆಗೆ ತೈಲ ಉತ್ಪಾದನೆಯ ಪ್ರಮುಖ ರಾಷ್ಟ್ರಗಳಿಗೆ ಬೆಲೆಗಳ ಬೆಲೆ, ಪೂರೈಕೆ ಮತ್ತು ಬೇಡಿಕೆಯ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ರಾಷ್ಟ್ರೀಯ ದೈನಕ ಮಿಂಟ್ ವರದಿ ಮಾಡಿದೆ.

ಅಂತಾರಾಷ್ಟ್ರೀಯವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದಂತೆ, ಪೆಟ್ರೋಲಿಯಂ ಸಚಿವಾಲಯವು ಸೌದಿ ಅರೇಬಿಯಾ, ಕುವೈತ್, ಯುಎಇ, ರಷ್ಯಾ ಮತ್ತು ಇತರ ಅನೇಕ ದೇಶಗಳ ಇಂಧನ ಸಚಿವಾಲಯಗಳಿಗೆ ಕರೆ ನೀಡಿದೆ. ಆದರೆ ತೈಲದ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಮರ ಮುಂದುವರಿದಿದೆ.

( Petrol, diesel prices immediate down; What central govt opinion )

Comments are closed.