ಸೋಮವಾರ, ಏಪ್ರಿಲ್ 28, 2025
HomeNationalPM MODI Birthday : ಪ್ರಧಾನಿ ಮೋದಿ ಹುಟ್ಟುಹಬ್ಬ : ಶುಭಾಶಯ ಕೋರಿದ ಗಣ್ಯರು

PM MODI Birthday : ಪ್ರಧಾನಿ ಮೋದಿ ಹುಟ್ಟುಹಬ್ಬ : ಶುಭಾಶಯ ಕೋರಿದ ಗಣ್ಯರು

- Advertisement -

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ನಮೋ ಇದೀಗ 71ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಗಣ್ಯರು ಪ್ರಧಾನಿ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ.

1950ರ ಸೆಪ್ಟೆಂಬರ್ 17ರಂದು ಉತ್ತರ ಗುಜರಾತ್​ನ ಮೆಹ್ಸಾನಾ ಜಿಲ್ಲೆಯ ವಡ್​ನಗರದಲ್ಲಿ ಬಡಕುಟುಂಬದಲ್ಲಿ ಜನಿಸಿದ ನರೇಂದ್ರ ಮೋದಿ ಪ್ರಧಾನಿಯಾಗಿ ಬೆಳೆದಿದ್ದೇ ರೋಚಕ ಕಹಾನಿ. ಬಾಲ್ಯದಿಂದಲೂ ಆರ್‌ಎಸ್‌ಎಸ್‌ (RSS )ನಲ್ಲಿ ಸಕ್ರಿಯರಾಗಿ ಒಂದೊಂದೇ ಮೆಟ್ಟಿಲುಗಳನ್ನು ಏರುತ್ತಾ ಸಾಗಿದ ಮೋದಿ, ನಂತರದಲ್ಲಿ ಭಾರತೀಯ ಜನತಾ ಪಕ್ಷದಲ್ಲಿನ ಹಲವು ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದರು. 2001ರಲ್ಲಿ ಮೊದಲ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾದ ನಮೋ ರಾಜಕೀಯವಾಗಿ ತಿರುಗಿ ನೋಡಿದ್ದೇ ಇಲ್ಲ.

Prime Minister Narendra Modi congratulates Teachers' Day

ಸತತ ಮೂರು ಚುನಾವಣೆಯಲ್ಲಿಯೇ ಗುಜರಾತ್‌ನಲ್ಲಿ ಬಿಜೆಪಿಯ ಜಯಭೇರಿ ಮೊಳಗಿಸಿದ್ದಾರೆ. ಅಲ್ಲದೇ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿಕೊಟ್ಟ ಮೋದಿ 2014ರ ಚುನಾವಣೆಯಲ್ಲಿ ಎನ್​ಡಿಎಗೆ ಬಹುಮತ ಪಡೆಯುವಲ್ಲಿಯೂ ಯಶಸ್ವಿಯಾಗಿದ್ದಾರೆ. ಮಾತ್ರವಲ್ಲ ದೇಶದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಅಷ್ಟೇ ಅಲ್ಲಾ ಉತ್ತಮ ಆಡಳಿತದ ಮೂಲಕ 2019ರ ಚುನಾವಣೆಯಲ್ಲೂ ಪಕ್ಷವನ್ನು ಗೆಲ್ಲಿಸುವ ಮೂಲಕ ಎರಡನೇ ಬಾರಿಗೆ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಧಾನಿ ನಮೋ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶದಾದ್ಯಂತ ಹಲವು ಸಾಮಾಜಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ದೇಶದ ಗಣ್ಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ.

ನಮೋ ಹುಟ್ಟುಹಬ್ಬಕ್ಕೆ ಶುಭಕೋರಿದ ಗೃಹ ಸಚಿವ ಅಮಿತ್‌ ಶಾ

ದೇಶದ ಜನರಿಗೆ ಕೇವಲ ಭವಿಷ್ಯದ ಕನಸುಗಳನ್ನು ನೀಡಿರುವುದಷ್ಟೇ ಅಲ್ಲಾ ಅದನ್ನು ಸಾಧಿಸಿ ತೋರಿಸಿದ್ದಾರೆ ಪ್ರಧಾನಿ ಮೋದಿ ಎನ್ನುವ ಮೂಲಕ ಮೋದಿ ಅವರ ಹುಟ್ಟುಹಬ್ಬಕ್ಕೆ ಶುಭಹಾರೈಸಿದ್ದಾರೆ.

ಹುಟ್ಟುಹಬ್ಬಕ್ಕೆ ಶುಭಕೋರಿದ ಸಚಿವ ನಿತಿನ್‌ ಗಡ್ಕರಿ

ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಪ್ರಧಾನಿ ಮೋದಿ ಅವರಿಗೆ ಶುಭ ಹಾರೈಸಿದ್ದು, ನಿಮ್ಮ ನೇತೃತ್ವದಲ್ಲಿ ಭಾರತ ಅತ್ಯುನ್ನತ ಎತ್ತರಕ್ಕೆ ಏರಲಿದೆ. ಭಾರತ ಸ್ವಾವಲಂಬಿಯಾಗುವ ಕನಸು ಸಾಕಾರವಾಗಲಿದೆ ಎಂದಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬಕ್ಕೆ ಶುಭಕೋರಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಪ್ರಧಾನಿ ಮೋದಿ ಅವರಿಗೆ ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ನಾನು ಸರ್ವಶಕ್ತ ದೇವರಲ್ಲಿ ಪ್ರಾರ್ಥಿಸುತ್ತೇನೆ. ನಮ್ಮ ಮಹಾನ್ ರಾಷ್ಟ್ರದ ಅವರ ನಾಯಕತ್ವವು ಅದರ ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹಾರೈಸಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಶುಭಕೋರಿದ ಸಚಿವ ರಾಜನಾಥ್‌ ಸಿಂಗ್‌

ಪ್ರಧಾನಿ ಮೋದಿ ಅವರ ದೂರದೃಷ್ಟಿ ನಿರ್ಣಯಗಳು ಅವರ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಮೋದಿ ಅವರ ನೇತೃತ್ವದಲ್ಲಿ ಭಾರತ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಶುಭಾ ಹಾರೈಸಿದ್ದಾರೆ.

ಪ್ರಧಾನಿ ಮೋದಿಗೆ ಅವರಿಗೆ ಶುಭ ಹಾರೈಸಿದ ಸಿ.ಎಂ.ಬಸವರಾಜ್‌ ಬೊಮ್ಮಾಯಿ

ಭಾರತಕ್ಕೆ ದೊರೆತ ದಿಟ್ಟ, ಸ್ಪಷ್ಟ, ಸಮರ್ಥ ನಾಯಕ ಮೋದಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ, ಪ್ರಧಾನಿಗೆ ಶುಭಹಾರೈಸಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಶುಭಕೋರಿದ ಮಾಜಿ ಸಿಎಮ್‌ ಬಿ.ಎಸ್.ಯಡಿಯೂರಪ್ಪ

ಕೋಟ್ಯಂತರ ಭಾರತೀಯರ ನೆಚ್ಚಿನ ಜನನಾಯಕ, ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ದೇವರ ಆನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶುಭಹಾರೈಸಿದ್ದಾರೆ

(PM Narendra Modi 71st Birthday celebration )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular