Tata Air India : ಟಾಟಾ ತೆಕ್ಕೆಗೆ ಜಾರಿಲ್ಲ ಏರ್‌ ಇಂಡಿಯಾ : ಸ್ಪಷ್ಟನೆ ಕೊಟ್ಟ ಕೇಂದ್ರ ಸರಕಾರ

ನವದೆಹಲಿ : ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್‌ ಖರೀದಿ ಮಾಡಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು. ಆದ್ರೆ ಈ ವರದಿಯನ್ನು ಕೇಂದ್ರ ಸರಕಾರ ಅಲ್ಲಗಳೆದಿದ್ದು, ಯಾವುದೇ ಬಿಡ್‌ ನಡೆದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಕೇಂದ್ರ ಸರಕಾರದ ಡಿಐಪಿಎಂ ಕಾರ್ಯದರ್ಶಿ ಅವರು ಟ್ವೀಟ್‌ ಮಾಡಿದ್ದು, ಏರ್‌ ಭಾರತದ ಸರಕಾದ ಹಣಕಾಸು ಬಿಡ್‌ಗಳ ಅನುಮೋದನೆಯನ್ನು ಸೂಚಿಸುವ ಮಾಧ್ಯಮಗಳ ವರದಿ ತಪ್ಪಾಗಿವೆ. ಏರ್‌ ಇಂಡಿಯಾ ವಿಮಾನ ಬಿಡ್‌ ಗೆ ಸಂಬಂಧಿಸಿದಂತೆ ಯಾವಾಗ, ಯಾವ ನಿರ್ಧಾರನ್ನು ಸರಕಾರ ತೆಗೆದುಕೊಳ್ಳಲಾಗುತ್ತದೆ ಅನ್ನುವ ಕುರಿತು ಮಾಧ್ಯಮಗಳಿಗೆ ತಿಳಿಸಲಾಗುವುದು ಎಂದಿದ್ದಾರೆ.

ನಷ್ಟದಲ್ಲಿರುವ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ ಖಾಸಗಿ ತೆಕ್ಕೆಗೆ ಸೇರಲಿದೆ ಅನ್ನುವ ಕುರಿತು ಸುದ್ದಿಗಳು ಬಿತ್ತರವಾಗಿತ್ತು. ಅದ್ರಲ್ಲೂ ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿತು. ಸ್ವಾತಂತ್ರ್ಯಾ ನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣ ಗೊಳಿಸಲಾಗಿತ್ತು. ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು. ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಯಿತು ಮತ್ತು ಜುಲೈ 29, 1946 ರಂದು ಏರ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು.

1953 ರಲ್ಲಿ, ಸರ್ಕಾರವು ಏರ್ ಕಾರ್ಪೊರೇಷನ್ ಕಾಯ್ದೆಯನ್ನು ಅಂಗೀಕರಿಸಿತು ಮತ್ತು ಕಂಪನಿಯ ಸ್ಥಾಪಕ ಜೆಆರ್ ಡಿ ಟಾಟಾ ಅವರಿಂದ ಮಾಲೀಕತ್ವದ ಹಕ್ಕುಗಳನ್ನು ಖರೀದಿಸಿತು. ನಂತರ ಈ ಕಂಪನಿಯನ್ನು ಏರ್ ಇಂಡಿಯಾ ಇಂಟರ್ ನ್ಯಾಷನಲ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಯಿತು. ಹೀಗಾಗಿ ಟಾಟಾ ಗ್ರೂಪ್ 68 ವರ್ಷಗಳ ನಂತರ ಮತ್ತೊಮ್ಮೆ ಕಂಪೆನಿ ಟಾಟಾ ಸಂಸ್ಥೆಯ ಪಾಲಾಗಿದೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ : Tata-Air India : ಟಾಟಾ ತೆಕ್ಕೆಗೆ ಏರ್‌ ಇಂಡಿಯಾ : 68 ವರ್ಷದ ಬಳಿಕ ಮರಳಿ ಪಡೆದ ಟಾಟಾ ಗ್ರೂಪ್

ಇದನ್ನೂ ಓದಿ : Aadhaar : ಕನ್ನಡದಲ್ಲೇ ನವೀಕರಿಸಬಹುದು ಆಧಾರ್‌ ಕಾರ್ಡ್‌ ಮಾಹಿತಿ

Comments are closed.