ವಾಷಿಂಗ್ಟನ್ : ಅಮೇರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರು , ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಭಯೋತ್ಪಾದನೆಗೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಿರುವ ವಿಚಾರದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಮಾಧ್ಯಮಗಳಿಗೆ ವಿದೇಶಾಂಗ ಕಾರ್ಯದರ್ಶಿ ಹರ್ಷ ಶೃಂಗ್ಲಾ ಮಾಹಿತಿ ನೀಡಿದರು.
ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕಾ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆಯಲ್ಲಿ ಉಭಯ ನಾಯಕರ ನಡುವೆ ನಡೆದ ಚರ್ಚೆಯಲ್ಲಿ ಭಯೋತ್ಪಾದನೆ ಕುರಿತು ಚರ್ಚೆ ನಡೆದಿದ್ದು, ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ, ಅಲ್ಲಿ ಉಗ್ರರ ಸಂಘಟನೆಗಳು ಕ್ರಿಯಾಶೀಲವಾಗಿವೆ ಎಂಬುದನ್ನು ಹ್ಯಾರಿಸ್ ಒಪ್ಪಿಕೊಂಡಿದ್ದಾರೆ’ ಎಂದು ತಿಳಿಸಿದರು.
ಇದನ್ನೂ ಓದಿ: ಪಂಜಾಬ್ ನಲ್ಲಿ ಮೂವರು ಶಂಕಿತ ಉಗ್ರರು ಅರೆಸ್ಟ್ : ಸ್ಪೋಟಕ, ಶಸ್ತ್ರಾಸ್ತ್ರ ವಶಕ್ಕೆ
ಆದರೆ ಉಗ್ರ ಸಂಘಟನೆಗಳಿಂದ ಅಮೆರಿಕ ಹಾಗೂ ಭಾರತದ ಭದ್ರತೆಯ ಮೇಲೆ ಯಾವುದೇ ಪರಿಣಾಮ ಉಂಟಾಗದ ಹಾಗೆ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ಹ್ಯಾರಿಸ್ ತಾಕೀತು ಮಾಡಿದ್ದಾರೆ. ಜೊತೆಗೆ ಭಯೋತ್ಪಾದನೆ ನಿಯಂತ್ರಿಸುವ ಮತ್ತು ಮೇಲ್ವಿಚಾರಣೆ ನಡೆಸುವ ಅಗತ್ಯತೆಯ ಕುರಿತು ಮೋದಿ ಹೇಳಿದ್ದು, ಇದಕ್ಕೆ ಕಮಲಾ ಹ್ಯಾರಿಸ್ ಒಪ್ಪಿಗೆ ನೀಡಿದ್ದಾರೆ’ ಎಂದೂ ಶೃಂಗ್ಲಾ ತಿಳಿಸಿದರು.
ಇದನ್ನೂ ಓದಿ: Encounter : ಕಾಶ್ಮೀರದಲ್ಲಿ ಎನ್ ಕೌಂಟರ್ ಗೆ ಭಯೋತ್ಪಾದಕ ಫಿನಿಶ್
(Terrorism control: PM Modi talks with Kamala Harris)