Wife Sold for Rs 500 : ಕೈ ಹಿಡಿದ ಪತ್ನಿಯನ್ನೇ 500 ರೂಪಾಯಿ ಮಾರಾಟ ಮಾಡಿದ ಪತಿ : ನಂತರ ನಡೆಯಿತು ಪೈಶಾಚಿಕ ಕೃತ್ಯ

ಅಹಮದಾಬಾದ್‌ : ಕೈ ಹಿಡಿದ ಪತ್ನಿಯನ್ನು ಹೋಟೆಲ್‌ಗೆ ಕರೆದೊಯ್ದಿದ್ದ ಪತಿ ಮಹಾಶಯನೋರ್ವ 500 ರೂಪಾಯಿಗೆ ಮಾರಾಟ ಮಾಡಿದ್ದಾನೆ. ಆದ್ರೆ ಆಕೆಯನ್ನು ಖರೀದಿಸಿದ ವ್ಯಕ್ತಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಸೋನು ಶರ್ಮಾ ಎಂಬಾತನೇ ಅತ್ಯಾಚಾರವೆಸಗಿದ ಆರೋಪಿ. 21 ವರ್ಷದ ಮಹಿಳೆ ತನ್ನ ಪತಿಯ ಜೊತೆಗೆ ಹೋಟೆಲ್‌ವೊಂದಕ್ಕೆ ತೆರಳಿದ್ದಾರೆ. ಈ ವೇಳೆಯಲ್ಲಿ ಆರೋಪಿ ಸೋನು ಶರ್ಮಾ ಎಂಬಾತನಿಗೆ ಪತ್ನಿಯನ್ನು ಐದು ನೂರು ರೂಪಾಯಿಗೆ ಮಾರಾಟ ಮಾಡಿದ್ದಾನೆ.

ಇದನ್ನೂ ಓದಿ : ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಬದುಕನ್ನೇ ಮುಗಿಸಿದ ಸಹಪಾಠಿ : ಪರೀಕ್ಷಾ ಕೊಠಡಿಯಲ್ಲಿ ನಡೆಯಿತು ಆಘಾತಕಾರಿ ಘಟನೆ

ನಂತರ ಮಹಿಳೆಯನ್ನು ಆರೋಪಿ ಸೋನುಶರ್ಮಾ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಈ ಕುರಿತು ಮಹಿಳೆ ಸ್ಥಳೀಯ ಠಾಣೆಗೆ ದೂರು ನೀಡಿದ್ದಾಳೆ. ಈ ವೇಳೆಯಲ್ಲಿ ತನ್ನ ಮೇಲೆ ಪೈಶಾಚಿಕ ಕೃತ್ಯವೆಸಗಿರೋದನ್ನು ತಿಳಿಸಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೋರ್ವರು ತಿಳಿಸಿದ್ದಾರೆ. ಮಹೀಳೆ ನೀಡಿದ ದೂರಿನ ಆಧಾರ ಮೇಲೆ ೨೪ ಗಂಟೆಯ ಒಳಗೆ ಪೊಲೀಸರು ಮಹಿಳೆಯ ಪತಿ ಹಾಗೂ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಯುವತಿಯನ್ನು ನಗ್ನಗೊಳಿಸಿ ವಿಡಿಯೋ : ಹಣಕ್ಕೆ ಡಿಮ್ಯಾಂಡ್‌ ಇಟ್ಟ ಆರೋಪಿಗಳ ಬಂಧನ

( Woman Sold off By Husband for 500 Rs Rape case Registered 2 Arrested in Gujarat )

Comments are closed.