ನವದೆಹಲಿ : ಪಾಕಿಸ್ತಾನ ಮತ್ತೆ ತನ್ನ ಹಳೆ ಚಾಳಿಯನ್ನು ಮುಂದುವರಿ ಸಿದೆ. ಕೊರೊನಾ ನಡುವಲ್ಲೇ ಜಮ್ಮು ಮತ್ತು ಕಾಶ್ಮೀರದ ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನದ ಸೇನೆ ಕದನ ವಿರಾಮ ಉಲ್ಲಂಘಿಸಿದೆ.
ಪಾಕಿಸ್ತಾನ ಸೈನಿಕರು ಕಾಶ್ಮೀರದ ಅರ್ನಿಯಾ ಸೆಕ್ಟರ್ ನಲ್ಲಿನ ಬಿಎಸ್ ಎಫ್ ಪೋಸ್ಚ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಈ ವೇಳೆಯಲ್ಲಿ ಬಿಎಸ್ ಎಫ್ ಪಡೆಗಳೂ ಕೂಡ ಪಾಕಿಸ್ತಾನಿ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದ್ದು, ಸುಮಾರು ಅರ್ಧಗಂಟೆಗಳ ಕಾಲ ಪರಸ್ಪರ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ.
ಫೆಬ್ರವರಿ 25ರ ಬಳಿಕ ಗಡಿಯಲ್ಲಿ ನಡೆದ 2ನೇ ಕದನ ವಿರಾಮ ಉಲ್ಲಂಘನೆ ಪ್ರಕರಣ ಇದಾಗಿದೆ. ಕಳೆದ ಕೆಲ ತಿಂಗಳಿನಿಂದ ಜನರು ನೆಮ್ಮದಿಯ ಜೀವನ ನಡೆಸುತ್ತಿದ್ದರು ಇದೀಗ ಗಡಿ ಯಲ್ಲಿ ಪಾಕ್ ಸೈನಿಕರ ಅಪ್ರಚೋದಿತ ದಾಳಿಯಿಂದಾಗಿ ಜೀವಭಯ ಎದುರಾಗಿದೆ.