ಭಾರತದಲ್ಲಿ 24 ಗಂಟೆಯಲ್ಲಿ 3.11 ಲಕ್ಷ ಜನರಿಗೆ ಸೋಂಕು : 4077 ಮಂದಿ ಬಲಿ

ನವದೆಹಲಿ :  ದೇಶದಲ್ಲಿ ಕೊರೊನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ಭಾರತದಲ್ಲಿ ಕಳೆದ 24 ತಾಸುಗಳಲ್ಲಿ ಭಾರತದಲ್ಲಿ 3,11,170 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 4,077ಮಂದಿಯನ್ನು ಸೋಂಕು ಬಲಿ ಪಡೆದಿದೆ.

ಭಾರತದಲ್ಲಿ ಒಟ್ಟು 18,32,950 ಮಂದಿಯನ್ನು ಕೊರೋನಾ ಪರೀಕ್ಷೆ ಒಳಪಡಿಸಲಾಗಿದ್ದು, 3,11,170 ಮಂದಿಗೆ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಇದುವರೆಗೆ 31,48,50,143 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ‌. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,46,84,077ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,70,284ಕ್ಕೆ ತಲುಪಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 36,18,458ಕ್ಕೆ ಏರಿಕೆಯಾಗಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 18,22,20,164 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

Comments are closed.