ನವದೆಹಲಿ : ದೇಶದಾದ್ಯಂತ ಕೊರೊನಾ ಸೋಂಕು ಹಳೆಯ ದಾಖಲೆಗಳನ್ನು ಅಳಿಸಿ ಹಾಕಿ ಮುನ್ನುಗ್ಗುತ್ತಿದೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 1,45,384 ಮಂದಿಗೆ ಕೊರೊನಾ ಸೋಂಕು ಕಾಣಿಸಿ ಕೊಳ್ಳುವ ಮೂಲಕ ಬಿಗ್ ಶಾಕ್ ಕೊಟ್ಟಿದೆ.

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರಕಾರ ಹಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆದರೂ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದೆ. ಇದೇ ಮೊದಲ ಬಾರಿಗೆ ದಿನವೊಂದಕ್ಕೆ ಹೊಸದಾಗಿ ಕೊರೊನಾ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆ ಒಂದೂವರೆ ಲಕ್ಷದ ಅಂಚಿಗೆ ಬಂದು ತಲುಪಿದೆ.
ದೇಶದಲ್ಲಿ ಕೊರೊನಾ ಸ್ಫೋಟಗೊಂಡಿದೆ. ಕಳೆದ 24 ಗಂಟೆಯಲ್ಲಿ 1,45,384 ಲಕ್ಷ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದರೆ, ಬರೋಬ್ಬರಿ 794 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು 10,46,631 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳು ತ್ತಿದ್ದು, ಮೃತರ ಸಂಖ್ಯೆ 1,68,436ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.