PM Narendra Modi meeting : ಭಾರತದಲ್ಲಿಂದು 1.59 ಲಕ್ಷ ಕೊರೊನಾ ಕೇಸ್‌ : ಸಂಜೆ ಅಧಿಕಾರಿಗಳ ಜೊತೆಗೆ ಪ್ರಧಾನಿ ಮೋದಿ ಮಹತ್ವದ ಸಭೆ

ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್‌ ಸೋಂಕು ಸ್ಪೋಟಗೊಂಡಿದೆ. ಇಂದು ಒಂದೇ ದಿನ ಬರೋಬ್ಬರಿ 1,59,632 ಕೊರೊನಾ ಸೋಂಕಿತ ಪ್ರಕರಣ ದಾಖಲಾಗಿದೆ. ಈ ಮೂಲಕ ಕೊರೊನಾ ಪಾಸಿಟಿವಿಟಿ ದರ 10.21%ಕ್ಕೆ ಏರಿಕೆ ಕಂಡಿದೆ. ಇದರ ಬೆನ್ನಲ್ಲೇ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi meeting) ಅವರು ಸಂಜೆ 4.30 ಕ್ಕೆ ಉನ್ನತ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕಳೆದ ಒಂದು ವಾರದ ಹಿಂದೆ ನಿತ್ಯದ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ 27,553ರಷ್ಟಿದ್ದು, ಕಳೆದ 24 ಗಂಟೆಗಳಲ್ಲಿ ಇಂದು ಬೆಳಿಗ್ಗೆ ಸುಮಾರು 1.6 ಲಕ್ಷ ಕೊರೊನಾ ಸೋಂಕಿನ ಪ್ರಕರಣ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಯನ್ನು ನೀಡಿದೆ. ದೇಶದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳ ಸಂಖ್ಯೆಯ ಜೊತೆಗೆ ಓಮಿಕ್ರಾನ್‌ ಪ್ರಕರಣಗಳು ಏರಿಕೆಯಾಗುತ್ತಿರುವುದು ಆತಂಕವನ್ನು ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸುವ ಸಲುವಾಗಿ ಪ್ರಧಾನಿ ಮೋದಿ ಅವರು ಇಂದು ಸಂಜೆ 4:30 ಅಧಿಕಾರಿಗಳ ಜೊತೆಗೆ ಮಹತ್ವದ ಸಭೆಯನ್ನು ನಡೆಸಲಿದ್ದಾರೆ.

ಈ ಹಿಂದೆ ಪಿಎಂ ನರೇಂದ್ರ ಮೋದಿ ಅವರು ಡಿಸೆಂಬರ್ 24 ರಂದು ಕೊನೆಯ ಬಾರಿಗೆ ಕೋವಿಡ್ ಸಭೆಯನ್ನು ನಡೆಸಿದರು, ಅದರಲ್ಲಿ ಅವರು ಮೂರನೇ ಅಲೆ ಸೋಂಕನ್ನುತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಇದೀಗ ಕೊರೊನಾ ಸ್ಪೋಟ ಸಂಭವಿಸುತ್ತಿದ್ದು, ದಿನೇ ದಿನೇ ಸೋಂಕಿತ ಪ್ರಕರಣ ಸಂಖ್ಯೆಯಲ್ಲಿಯೂ ವಿಪರೀತ ಏರಿಕೆಯನ್ನು ಕಾಣುತ್ತಿದೆ. ಇದೇ ಕಾರಣಕ್ಕೆ ಇಂದಿನ ಸಭೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.

ಯುಪಿ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ನಿನ್ನೆ ಪ್ರಕಟಿಸಿದೆ. ಕೋವಿಡ್ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಯನ್ನು ಮುಂದೂಡುವಂತೆ ಅಲಹಾಬಾದ್ ಹೈಕೋರ್ಟ್ ಉನ್ನತ ಚುನಾವಣಾ ಸಂಸ್ಥೆಯನ್ನು ಒತ್ತಾಯಿಸಿತ್ತು. ಆದಾಗ್ಯೂ, ಆಯೋಗ, ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ವೈದ್ಯಕೀಯ ತಜ್ಞರ ನಡುವಿನ ಸಭೆಗಳ ನಂತರ, ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದ್ದರು.

ಇದನ್ನೂ ಓದಿ :  ಓಮಿಕ್ರಾನ್​ ರೂಪಾಂತರಿಯ ವಿರುದ್ಧ ಬಟ್ಟೆ ಮಾಸ್ಕ್​ ಪರಿಣಾಮಕಾರಿಯಲ್ಲ : ಅಧ್ಯಯನ

ಇದನ್ನೂ ಓದಿ : ಮಕ್ಕಳ ಲಸಿಕೆ ಅಭಿಯಾನದಲ್ಲಿ ಹೊಸ ಮೈಲಿಗಲ್ಲು

ಇದನ್ನೂ ಓದಿ : ಕರ್ನಾಟಕದಲ್ಲಿಂದು 8,906 ಹೊಸ ಕೋವಿಡ್​ ಪ್ರಕರಣ

( Today 1.59 lakh Corona Case, PM Narendra Modi To Chair Meeting At 4:30 PM On Covid Situation in india)

Comments are closed.