Heeraben Modi Death: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ನಿಧನ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಶತಾಯುಷಿ ಹೀರಾಬೆನ್ ಮೋದಿ (Heeraben Modi) ಗುಜರಾತಿನನ ಅಹಮದಾಬಾದ್ ನಲ್ಲಿ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಯು.ಎನ್.ಮೆಹ್ತಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

2022ರ ಜೂನ್ 18ರಂದು ಹೀರಾಬೆನ್ ಮೋದಿ ಅವರು 100ನೇ ವರ್ಷದ ಜನ್ಮದಿನಾಚರಣೆಯನ್ನು ಆಚರಿಸಿಕೊಂಡಿದ್ದರು. ಈ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಾಯಿಯ ಪಾದ ತೊಳೆದು ಪೂಜೆ ಸಲ್ಲಿಸಿ, ಆಶೀರ್ವಾದವನ್ನು ಪಡೆದುಕೊಂಡಿದ್ದರು.

ತಾಯಿ ಹೀರಾಬೆನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಶತಾಯುಷಿಯಾಗಿ ಬದುಕಿ ಈಶ್ವರನ ಪಾದಗಳಲ್ಲಿ ಲೀನರಾಗಿದ್ದಾರೆ, ನಮ್ಮ ತಾಯಿಯ ಜೀವನದ ಮೂರು ಹಂತ ಕಂಡಿದ್ದೇನೆ. ತಪಸ್ವೀ ಬದುಕು, ನಿಸ್ವಾರ್ಥತೆ ಪ್ರತೀಕ, ಮೌಲ್ಯಾಧಾರಿತ ಬದ್ಧತೆ ಎಂದು ಟ್ವೀಟ್​ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರಿಗೆ ಉಸಿರಾಟದ ಸಮಸ್ಯೆ ಕಾರಣಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರದಲ್ಲಿ ಚಿಕಿತ್ಸೆ ನೀಡಿದ್ದ ವೈದ್ಯರು ಆರೋಗ್ಯ ಸುಧಾರಿಸುತ್ತಿರುವುದಾಗಿ ಮಾಹಿತಿಯನ್ನು ನೀಡಿದ್ದರು. ಆದರೆ ಇದೀಗ ಅವರು ಶುಕ್ರವಾರ ವಿಧಿವಶರಾಗಿದ್ದಾರೆ.

1923 ಜೂನ್ 18ರಂದು ಜನಿಸಿದ್ದ ಹೀರಾಬೆನ್ ಹೀರಾಬೆನ್ ಗಾಂಧಿನಗರದ ಗ್ರಾಮೀಣ ಪ್ರದೇಶವಾದ ರಾಯಸನ್ ಗ್ರಾಮದಲ್ಲಿ ನರೇಂದ್ರ ಮೋದಿಯವರ ಕಿರಿಯ ಸಹೋದರ ಪಂಕಜ್ ಮೋದಿ ಜತೆ ವಾಸವಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಆಗಿದ್ದರೂ ಕೂಡ ಸದಾ ಸರಳತೆಯಿಂದಲೇ ಬದುಕಲು ಅವರು ಇಷ್ಟಪಡುತ್ತಿದ್ದರು. ಅಲ್ಲದೇ ಅವರು ಓಡಾಟಕ್ಕೆ ಸಾರ್ವಜನಿಕ ಸಾರಿಗೆಯನ್ನೇ ಬಳಸುತ್ತಿದ್ದರು.

ಇದನ್ನೂ ಓದಿ : Electricity bill: ಹೊಸ ವರ್ಷದ ಹೊಸ್ತಿಲಲ್ಲಿ ಸರ್ಕಾರದಿಂದ ಗುಡ್ ನ್ಯೂಸ್; ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ

ಇದನ್ನೂ ಓದಿ : Chips Filled With Air:ನೀವು ತಿನ್ನುವ ಚಿಪ್ಸ್‌ ಪ್ಯಾಕ್‌ ನಲ್ಲಿ ಯಾಕೆ ಗಾಳಿ ತುಂಬಿರುತ್ತೆ ಗೊತ್ತಾ?

ಇದನ್ನೂ ಓದಿ : ADA Recruitment 2023 : ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ನೇಮಕಾತಿ: ವೇತನ 81100 ರೂ

ಇಂಗ್ಲಿಷ್‌ ಸುದ್ದಿಗಾಗಿ ಕ್ಲಿಕ್‌ ಮಾಡಿ

indian Prime Minister Narendra Modi’s mother Heeraben Modi passed away

Comments are closed.