ಬೆಂಗಳೂರು : (Indigo flight emergency landing) ರಾಜ್ಯ ರಾಜಧಾನಿಯಿಂದ ವಾರಣಾಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ಮಂಗಳವಾರ ಬೆಳಗ್ಗೆ ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ. ಬೆಂಗಳೂರಿನಿಂದ ಹೊರಟಿದ್ದ ವಿಮಾನ ಸಂಖ್ಯೆ 6E897 ಇಂದು ಬೆಳಗ್ಗೆ 6.15ಕ್ಕೆ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು. ವಿಮಾನದಲ್ಲಿ 137 ಪ್ರಯಾಣಿಕರಿದ್ದರು ಎನ್ನಲಾಗಿದೆ.
ವಿಮಾನ ತಾಂತ್ರಿಕ ಸಮಸ್ಯೆಯ ಕಾರಣದಿಂದಾಗಿ ಬೆಂಗಳೂರಿನಿಂದ ವಾರಣಾಸಿಗೆ 137 ಪ್ರಯಾಣಿಕರೊಂದಿಗೆ ಹೊರಟಿದ್ದ ಇಂಡಿಗೋ ವಿಮಾನ ತೆಲಂಗಾಣ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ತೊಂದರೆ ಕಂಡುಬಂದಿಲ್ಲ.
ANI ವರದಿಗಳ ಪ್ರಕಾರ ಎಲ್ಲಾ 137 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು DGCA ತಿಳಿಸಿದೆ. 137 ಪ್ರಯಾಣಿಕರಿದ್ದ ಬೆಂಗಳೂರಿನಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ (6E897) ತಾಂತ್ರಿಕ ಸಮಸ್ಯೆಯಿಂದಾಗಿ ಇಂದು ಬೆಳಗ್ಗೆ 6.15ಕ್ಕೆ ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ” ಎಂದು ಭಾರತೀಯ ನಾಗರಿಕ ವಿಮಾನಯಾನ ನಿಯಂತ್ರಕ ತಿಳಿಸಿದೆ.
ಇದನ್ನೂ ಓದಿ : ಕೋವಿಡ್ ಪ್ರಕರಣ ಹೆಚ್ಚಳ : ಈ ಜಿಲ್ಲೆಗಳಲ್ಲಿ ಮಾಸ್ಕ್ ಕಡ್ಡಾಯ
ಇದನ್ನೂ ಓದಿ : ಆರ್‌ಬಿಐಗೆ ಹೊಸ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೀರಜ್ ನಿಗಮ್ ನೇಮಕ
ಇದನ್ನೂ ಓದಿ : ಪ್ಯಾನ್ ಆಧಾರ್ ಲಿಂಕ್ ಉಚಿತ : ಈ ಕುರಿತು ಸ್ಪಷ್ಟನೆ ನೀಡಿದ ಕೇಂದ್ರ ಸರಕಾರ
Indigo flight which was going to Varanasi made an emergency landing in Telangana