ನವದೆಹಲಿ: ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಹೊರ ರಾಜ್ಯಗಳ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸ ಲಾಗಿತ್ತು. ಆದರೀಗ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯವಲ್ಲ ಎಂದಿದೆ.
ಅಂತರ್ ರಾಜ್ಯ ಪ್ರಯಾಣವನ್ನ ಕೈಗೊಳ್ಳುವ ಆರೋಗ್ಯವಂತ ವ್ಯಕ್ತಿಗಳು ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸುವುದು ಕಡ್ಡಾಯ ವಲ್ಲ ಎಂದಿದೆ. ಕೊರೊನಾ ಸೋಂಕು ಹೆಚ್ಚಳವಾಗುತ್ತಿ ರುವ ಹಿನ್ನೆಲೆಯಲ್ಲಿ ಪ್ರಯೋಗಾಲಯಗಳ ಮೇಲಿನ ಹೊರೆಯನ್ನ ಕಡಿಮೆ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ.
ಆರೋಗ್ಯ ವಮನತ ವ್ಯಕ್ತಿಗಳು ಪ್ರಯಾಣದ ವೇಳೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವುದು ಬೇಡ. ಬದಲಾಗಿ ರೋಗ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳು ಮಾತ್ರವೇ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದಿದೆ.
https://twitter.com/ANI/status/1389584779369058304?s=19
