Kalasa Banduri project : ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಅನುಮತಿ ನೀಡಿದ ಕೇಂದ್ರ ಸರಕಾರ

ಹುಬ್ಬಳ್ಳಿ : ಕೇಂದ್ರ ಜಲ ಆಯೋಗದಿಂದ ಡಿಸೆಂಬರ್‌ 29ರಂದು ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷೆಯ ಕಳಸಾ ಬಂಡೂರಿ ನಾಲಾ ಯೋಜನೆಯ (Kalasa Banduri project) ವಿಸ್ತೃತ ಯೋಜನೆಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿಡಿಯೋವನ್ನು ಟ್ವಿಟರ್ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್‌ ಜೋಷಿ ಅವರು ಇಂದು ಟ್ವೀಟ್‌ ಮಾಡಿದ್ದು, ಕಳಸಾ ಬಂಡೂರಿ ನಾಲಾ ಯೋಜನೆಗೆ ವಿಸ್ತೃತ ಯೋಜನೆಗೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ. ಕರ್ನಾಟಕಕ್ಕೆ ಅತ್ಯಂತ ಅವಶ್ಯವಾದ ಈ ಯೋಜನೆಗೆ ಅನುಮೋದನೆ ದೊರೆಯಲು ಸಹಕರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಷಾ, ಜಲಶಕ್ತಿ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌, ರಚನಾತ್ಮಕ ಯೋಜನಾ ವರದಿ ನಿರೂಪಿಸಿದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಬಿ.ಎಸ್‌ ಯಡಿಯೂರಪ್ಪ, ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಕೇಂದ್ರ ಸರಕಾರದ ಸುತ್ತೋಲೆಯನ್ನು ಸಚಿವರು ಟ್ವೀಟ್‌ ಮಾಡಿದ್ದು, ಮಹಾರಾಷ್ಟ್ರ, ಕರ್ನಾಟಕ, ಗೋವಾ ರಾಜ್ಯಗಳನ್ನು ಒಳಗೊಂಡ ಮಹಾದಾಯಿ ನದಿಪಾತ್ರದಲ್ಲಿ 2032 ಚದರ ಅಡಿ ಅಚ್ಚುಕಟ್ಟು ಪ್ರದೇಶವಿದೆ. ಇದರಲ್ಲಿ ಗೋವಾ 1580, ಕರ್ನಾಟಕ 375, ಮಹಾರಾಷ್ಟ್ರ 77 ಚದರ ಕಿಮೀ ಪಾಲಿ ಹೊಂದಿದೆ. 2010ರ ನವೆಂಬರ್‌ 16ರಂದು ನದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಕರಣ ರಚಿಸಲಾಗಿದ್ದು, 2018ರ ಆಗಸ್ಟ್‌ 14ರಂದು ವರದಿ ಸಲ್ಲಿಕೆಯಾಗಿದೆ. ಪರಿಸರ ಸಂರಕ್ಷಣೆ ಮತ್ತು ಇತರ ನಿಯಮಗಳನ್ನು ಪಾಲಿಸಿ ಮಹಾದಾಯಿಯಿಂದ 2.18ಟಿಎಂಸಿ ನೀರನ್ನು ಬಂಡೂರ ಮತ್ತು 1.7 ಟಿಎಂಸಿ ನೀರನ್ನು ಕಳಸಾ ಅಣೆಕಟ್ಟಿಗೆ ಹಂಚಿಕೆ ಮಾಡಲಾಗಿದೆ.

ಇದನ್ನೂ ಬಳಕೆ ಮಾಡಿಕೊಳ್ಳಲು ಕರ್ನಾಟಕ ಸರಕಾರ ಹೊಸ ಯೋಜನೆಗಳನ್ನು ರೂಪಿಸಿಕೊಳ್ಳಬಹುದಾಗಿದೆ. ಕಳಸಾ ಬಂಡೂರಿ ಹುಬ್ಬಳ್ಳಿ ಧಾರವಾಡ, ಗದಗ ಮತ್ತು ಬೆಳಗಾವಿಯ ಬಹುತೇಕ ಭಾಗಗಳಿಗೆ ಕುಡಿಯುವ ನೀರು ಪೊರೈಸುವ ಮಹತ್ವದ ಯೋಜನೆಯಾಗಿದೆ. ಇದಕ್ಕಾಗಿ ನವಲಹುಂದ ಮತ್ತುಇದಕ್ಕಾಗಿ ನವಲಗುಂದ ಮತ್ತು ನರಗುಂದ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಅನೇಕ ರೈತರು ವರ್ಷಗಳಿಂದ ನಿರಂತರ ಪ್ರತಿಭಟನೆ ನಡೆಸಿದರು. ರಾಜಕೀಯವಾಗಿಯೂ ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಇದನ್ನೂ ಓದಿ : Heeraben Modi Health : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಚೇತರಿಕೆ

ಇದನ್ನೂ ಓದಿ : Heeraben Modi Health Update‌ : ಆಸ್ಪತ್ರೆಗೆ ಭೇಟಿ ನೀಡಿ ಅಮ್ಮನ ಯೋಗಕ್ಷೇಮ ವಿಚಾರಿಸಿದ ಮೋದಿ: ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ರಾಹುಲ್ ಗಾಂಧಿ

ಇದನ್ನೂ ಓದಿ : Heeraben Modi :ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಅಂತಿಮವಾಗಿ ನ್ಯಾಯಾಕರಣ ತೀರ್ಪು ನೀಡಿ ನದಿನೀರಿನ ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಿದೆ. ತೀರ್ಪು ಅಧಿಸೂಚನೆಯಾಗಿಯೂ ಜಾರಿಯಾಗಿದೆ. ಆ ಬಳಿಕ ಕಳಸಾ-ಬಂಡೂರಿ ಯೋಜನೆ ಜಾರಿಗೆ ಭಾರೀ ಒತ್ತಡಗಳು ಕೇಳಿಬಂದಿದ್ದು, ಯೋಜನೆಗೆ ಪ್ರಬಲ ವಿರೋಧ ವ್ಯಕ್ತಪಡಿಸಿದ ಗೋವಾ ಸರಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಮಹಾರಾಷ್ಟ್ರ, ಕರ್ನಾಟಕ ಸರಕಾರಗಳು ಕೂಡ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿವೆ. ಇಂದು ಕೇಂದ್ರ ಜಲ ಆಯೋಗ ವಿಸ್ತೃತ ಯೋಜನಾ ವರದಿ (ಡಿಪಿಆರ್)ಗೆ ಅನುಮತಿ ನೀಡಿದ್ದು, ಇದು ಸುಪ್ರೀಂಕೋರ್ಟ್‍ನ ಅಂತಿಮ ತೀರ್ಪಿಗೆ ಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

Kalasa Banduri project: The central government has given permission for Kalasa Banduri extended project

Comments are closed.