ದೆಹಲಿ : Kamal Nath :ಮುಂಬರುವ ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಎಲ್ಲಾ ವದಂತಿಗಳಿಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಧ್ಯ ಪ್ರದೇಶದ ಮಾಜಿ ಸಿಎಂ ಕಮಲ್ನಾಥ್ ತೆರೆ ಎಳೆದಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಕಮಲ್ನಾಥ್ ಭೇಟಿಯಾದ ಬಳಿಕ ಇವರು ಈ ಬಾರಿ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡಿದ್ದವು. ಇದೇ ವಿಚಾರವಾಗಿ ಮಾಧ್ಯಮಗಳ ಎದುರು ಸ್ಪಷ್ಟನೆ ನೀಡಿದ ಕಮಲ್ನಾಥ್ ನನಗೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷನಾಗಲು ಯಾವುದೇ ರೀತಿಯ ಆಸಕ್ತಿ ಇಲ್ಲ ಎಂದಿದ್ದಾರೆ.
ನನಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲೆ ಯಾವುದೇ ಆಸಕ್ತಿಯಿಲ್ಲ. ನಾನು ನವರಾತ್ರಿಗೆಂದು ದೆಹಲಿಗೆ ಆಗಮಿಸಿದ್ದೆ ಎಂದು ಕಮಲ್ನಾಥ್ ಸ್ಪಷ್ಟನೆ ನೀಡಿದ್ದಾರೆ. ಕಮಲ್ನಾಥ್ ರಾಜಸ್ಥಾನದಲ್ಲಿ ಪೂರ್ಣ ಪ್ರಮಾಣದ ರಾಜಕೀಯ ಬಿಕ್ಕಟ್ಟನ್ನು ಶಮನಗೊಳಿಸಲು ಮಧ್ಯವರ್ತಿಯಂತೆ ಪಕ್ಷಕ್ಕೆ ಸಾಥ್ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ .
ಮುಂದಿನ ತಿಂಗಳು ನಡೆಯಲಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆಯ ರೇಸ್ನಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಶಶಿ ತರೂರ್ ಹೆಸರು ಮುಂಚೂಣಿಯಾಗಿ ಕೇಳಿ ಬರ್ತಿದೆ. ಒಂದು ವೇಳೆ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಆಯ್ಕೆಯಾದಲ್ಲಿ ಪಕ್ಷದ ಒಬ್ಬ ವ್ಯಕ್ತಿ , ಒಂದು ಹುದ್ದೆ ನಿಯಮದ ಅಡಿಯಲ್ಲಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಸೆಪ್ಟೆಂಬರ್ 30ಕ್ಕೆ ಕೊನೆಗೊಳ್ಳಲಿದ್ದು, ಅಕ್ಟೋಬರ್ 19ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
ಈ ನಡುವೆ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ರಾಜಸ್ಥಾನದ ಬೆಳವಣಿಗೆಗಳ ಬಗ್ಗೆ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ವಿವರಿಸಿದರು ಮತ್ತು ಇಂದು ಪಕ್ಷದ ರಾಜ್ಯ ಘಟಕದಲ್ಲಿನ ಬಿಕ್ಕಟ್ಟಿನ ಬಗ್ಗೆ ಲಿಖಿತ ವರದಿಯನ್ನು ಸಲ್ಲಿಸಲಿದ್ದಾರೆ.
ಇದನ್ನೂ ಓದಿ : Team India arrives in Thiruvananthapuram: ಸಂಜು ಸ್ಯಾಮ್ಸನ್ ನಾಡಿಗೆ ಬಂದಿಳಿದ ಟೀಮ್ ಇಂಡಿಯಾಗೆ ಭರ್ಜರಿ ವೆಲ್ ಕಮ್
Kamal Nath refutes Congress president poll speculation: ‘Not interested’