Kamal Nath:‘ಕಾಂಗ್ರೆಸ್​ ಅಧ್ಯಕ್ಷನಾಗಲು ನನಗೆ ಯಾವುದೇ ಆಸಕ್ತಿಯಿಲ್ಲ’ : ಮಾಜಿ ಸಿಎಂ ಕಮಲನಾಥ್​​ ಸ್ಪಷ್ಟನೆ

ದೆಹಲಿ : Kamal Nath :ಮುಂಬರುವ ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಎಲ್ಲಾ ವದಂತಿಗಳಿಗೆ ಹಿರಿಯ ಕಾಂಗ್ರೆಸ್​ ನಾಯಕ ಹಾಗೂ ಮಧ್ಯ ಪ್ರದೇಶದ ಮಾಜಿ ಸಿಎಂ ಕಮಲ್​ನಾಥ್​​ ತೆರೆ ಎಳೆದಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಕಮಲ್​ನಾಥ್​ ಭೇಟಿಯಾದ ಬಳಿಕ ಇವರು ಈ ಬಾರಿ ಕಾಂಗ್ರೆಸ್​ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡಿದ್ದವು. ಇದೇ ವಿಚಾರವಾಗಿ ಮಾಧ್ಯಮಗಳ ಎದುರು ಸ್ಪಷ್ಟನೆ ನೀಡಿದ ಕಮಲ್​ನಾಥ್​ ನನಗೆ ಕಾಂಗ್ರೆಸ್​ ರಾಷ್ಟ್ರಾಧ್ಯಕ್ಷನಾಗಲು ಯಾವುದೇ ರೀತಿಯ ಆಸಕ್ತಿ ಇಲ್ಲ ಎಂದಿದ್ದಾರೆ.


ನನಗೆ ಕಾಂಗ್ರೆಸ್​ ಅಧ್ಯಕ್ಷ ಸ್ಥಾನದ ಮೇಲೆ ಯಾವುದೇ ಆಸಕ್ತಿಯಿಲ್ಲ. ನಾನು ನವರಾತ್ರಿಗೆಂದು ದೆಹಲಿಗೆ ಆಗಮಿಸಿದ್ದೆ ಎಂದು ಕಮಲ್​ನಾಥ್​ ಸ್ಪಷ್ಟನೆ ನೀಡಿದ್ದಾರೆ. ಕಮಲ್​ನಾಥ್​ ರಾಜಸ್ಥಾನದಲ್ಲಿ ಪೂರ್ಣ ಪ್ರಮಾಣದ ರಾಜಕೀಯ ಬಿಕ್ಕಟ್ಟನ್ನು ಶಮನಗೊಳಿಸಲು ಮಧ್ಯವರ್ತಿಯಂತೆ ಪಕ್ಷಕ್ಕೆ ಸಾಥ್​ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ .


ಮುಂದಿನ ತಿಂಗಳು ನಡೆಯಲಿರುವ ಕಾಂಗ್ರೆಸ್​ ಪಕ್ಷದ ಅಧ್ಯಕ್ಷೀಯ ಚುನಾವಣೆಯ ರೇಸ್​​ನಲ್ಲಿ ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ ಹಾಗೂ ಶಶಿ ತರೂರ್​ ಹೆಸರು ಮುಂಚೂಣಿಯಾಗಿ ಕೇಳಿ ಬರ್ತಿದೆ. ಒಂದು ವೇಳೆ ಅಶೋಕ್​ ಗೆಹ್ಲೋಟ್​ ಕಾಂಗ್ರೆಸ್​ ಪಕ್ಷದ ಅಧ್ಯಕ್ಷನಾಗಿ ಆಯ್ಕೆಯಾದಲ್ಲಿ ಪಕ್ಷದ ಒಬ್ಬ ವ್ಯಕ್ತಿ , ಒಂದು ಹುದ್ದೆ ನಿಯಮದ ಅಡಿಯಲ್ಲಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.


ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಸೆಪ್ಟೆಂಬರ್ 30ಕ್ಕೆ ಕೊನೆಗೊಳ್ಳಲಿದ್ದು, ಅಕ್ಟೋಬರ್ 19ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
ಈ ನಡುವೆ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ರಾಜಸ್ಥಾನದ ಬೆಳವಣಿಗೆಗಳ ಬಗ್ಗೆ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ವಿವರಿಸಿದರು ಮತ್ತು ಇಂದು ಪಕ್ಷದ ರಾಜ್ಯ ಘಟಕದಲ್ಲಿನ ಬಿಕ್ಕಟ್ಟಿನ ಬಗ್ಗೆ ಲಿಖಿತ ವರದಿಯನ್ನು ಸಲ್ಲಿಸಲಿದ್ದಾರೆ.

ಇದನ್ನು ಓದಿ :India vs South Africa T20 Series : ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೂ ಮೊದಲೇ ಭಾರತಕ್ಕೆ ಆಘಾತ; ಸ್ಟಾರ್ ಪ್ಲೇಯರ್ ಸರಣಿಯಿಂದಲೇ ಔಟ್

ಇದನ್ನೂ ಓದಿ : Team India arrives in Thiruvananthapuram: ಸಂಜು ಸ್ಯಾಮ್ಸನ್ ನಾಡಿಗೆ ಬಂದಿಳಿದ ಟೀಮ್ ಇಂಡಿಯಾಗೆ ಭರ್ಜರಿ ವೆಲ್ ಕಮ್

Kamal Nath refutes Congress president poll speculation: ‘Not interested’

Comments are closed.