ಮಿನಿ ಬಸ್ – ಜೆಸಿಬಿ ಢಿಕ್ಕಿ : 17 ಮಂದಿ ಸಾವು, 6 ಮಂದಿ ಗಂಭೀರ : ಪ್ರಧಾನಿ ಸಂತಾಪ

ಕಾನ್ಪುರ : ಮಿನಿ ಬಸ್ ಹಾಗೂ ಜೆಸಿಬಿ ನಡುವೆ ನಡೆದ ಭೀಕರ ಅಪ‍ಆಘಾತದಲ್ಲಿ 17 ಮಂದಿ ಸಾವನ್ನಪ್ಪಿ 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಮಿನಿಬಸ್ ಲಕ್ನೋದಿಂದ ದೆಹಲಿಗೆ ಪ್ರಯಾಣ ಬೆಳಸುತ್ತಿದ್ದು, ಕಾನ್ಪುರ ಸಚೆಂಡಿ ಬಳಿಯಲ್ಲಿ ಜೆಸಿಬಿ ಲೋಡರ್ ಗೆ ಢಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ 17 ಮಂದಿ ಸಾವನ್ನಪ್ಪಿದ್ದು, ಗಾಯಗೊಂಡಿರುವ 6 ಮಂದಿಯನ್ನು ನಗರದ ಹ್ಯಾಲೆಟ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತ ಪಡಿಸಿದ್ದು, ಮೃತ ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಯನ್ನು ಮಾಡಿದ್ದಾರೆ. ಅಲ್ಲದೇ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೇ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

Comments are closed.