ಕಂಪ್ಲೀಟ್ ಕರ್ನಾಟಕದಲ್ಲಿ ಲಾಕ್ ಡೌನ್ : ರಾಜ್ಯದಾದ್ಯಂತ ಕರೋನಾ ಕರ್ಪ್ಯೂ

1

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಾದ್ಯಂತ ಲಾಕ್ ಡೌನ್ ಆದೇಶ ಹೊರಡಿಸಲಾಗಿದ್ದು, ಮಾರ್ಚ್ 31ರ ವರೆಗೆ ಇಡೀ ಕರ್ನಾಟಕ ರಾಜ್ಯದಾದ್ಯಂತ ಕೊರೊನಾ ಕರ್ಪ್ಯೂ ಹೇರಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಟ್ವೀಟ್ ಮಾಡಿರೋ ಸಿಎಂ ಬಿಎಸ್ ವೈ ರಾಜ್ಯದಾದ್ಯಂತ ಸರಕಾರಿ ಹಾಗೂ ಖಾಸಗಿ ವಾಹನಗಳು ಸೇರಿದಂತೆ ಸಂಪೂರ್ಣವಾಗಿ ಸಂಚಾರ ವ್ಯವಸ್ಥೆಯನ್ನೇ ಬಂದ್ ಮಾಡಲು ರಾಜ್ಯ ಸರಕಾರ ಮುಂದಾಗಿದೆ ಎಂದಿದ್ದಾರೆ. ರಾಜ್ಯದಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಮಾಡಿರೋದ್ರಿಂದಾಗಿ ಕೆಎಸ್ಆರ್ ಟಿಸಿ, ಬಿಎಂಟಿಸಿ ಹಾಗೂ ಖಾಸಗಿ ಬಸ್ ಸಂಚಾರ ಸಂಪೂರ್ಣವಾಗಿ ಸ್ತಬ್ದವಾಗಲಿದೆ. ಓಲಾ, ಉಬರ್, ಸೇರಿದಂತೆ ಟ್ಯಾಕ್ಸಿ ಸೇವೆಯೂ ಬಂದ್ ಆಗಲಿದೆ.

1 Comment
  1. Raghavendra says

    ರಾಜ್ಯ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದಾರೆ

Leave A Reply

Your email address will not be published.