ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಎರಡು ದಿನ ಕಾಲ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ನವೆಂಬರ್ 25 ಮತ್ತು 26 ರಂದು ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ನ.25ರಂದು ಸಾಧಾರಣ ಮಳೆಯಾದರೆ, ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರದಲ್ಲಿ ನ.26ರಂದು ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ.
ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.