Karnataka hijab ban : ಶಾಲೆ, ಕಾಲೇಜಲ್ಲಿ ಹಿಜಾಬ್ ಗೆ ಅವಕಾಶವಿಲ್ಲ, ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ : (Karnataka hijab ban) ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದೆ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ನ್ಯಾಯಮೂರ್ತಿಯರು ವಿಭಿನ್ನ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸಿಜೆಐ ವಿಸ್ತ್ರತ ಪೀಠಕ್ಕೆ (supreme court judgment) ವರ್ಗಾವಣೆ‌ ಮಾಡಿ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯಲ್ಲಿ ಹುಟ್ಟಿಕೊಂಡಿದ್ದ ಹಿಜಾಬ್ ವಿವಾದ ದೇಶದಾದ್ಯಂತ ಸಂಚಲನವನ್ನು ಮೂಡಿಸಿತ್ತು. ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲೀಂ ವಿದ್ಯಾರ್ಥಿನಿಯರು ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಶೈಕ್ಷಣಿಕ ಸಂಸ್ಥೆಯಲ್ಲಿ ಹಿಜಾಬ್ ಧರಿಸಲು ಅನುಮತಿಯನ್ನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಮುಸ್ಲೀಂ ವಿದ್ಯಾರ್ಥಿನಿಯರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಹಾಗೂ ನ್ಯಾ.ಸುಧಾಂಶು ಅವರು ವಿಭಿನ್ನ ತೀರ್ಪನ್ನು ಪ್ರಕಟಿಸಿದ್ದಾರೆ.

ನ್ಯಾ.ಹೇಮಂತ್ ಗುಪ್ತಾ ಅವರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಸ್ಲೀಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಆದರೆ ನ್ಯಾ.ಸುಧಾಂಶು ಅವರು ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ವಜಾಗೊಳಿಸಿದೆ. ಇಬ್ಬರೂ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಜೆಐ ವಿಸ್ತ್ರತ ಪೀಠಕ್ಕೆ ವರ್ಗಾವಣೆಯನ್ನು ಮಾಡಿ ಆದೇಶ ಹೊರಡಿಸಿದೆ.

ಸಿಜೆಐ ಪೀಠದ ಅಂತಿಮ ತೀರ್ಪು ಬರುವವರೆಗೂ ಕೂಡ ಶಾಲೆ, ಕಾಲೇಜುಗಳಲ್ಲಿ ಯಥಾಸ್ಥಿತಿಯನ್ನು ಕಾಪಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಸದ್ಯ ರಾಜ್ಯದಲ್ಲಿನ ಶಾಲೆ, ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶವಿಲ್ಲ. ಹೀಗಾಗಿ ರಾಜ್ಯ ಸರಕಾರದ ಆದೇಶ ಎಂದಿನಂತೆಯೇ ಮುಂದುವರಿಯಲಿದೆ. ಅಲ್ಲದೇ ಹೈಕೋರ್ಟ್‌ ಆದೇಶ ಮುಂದುವರಿಕೆ ಆಗಲಿದೆ. ಇದೀಗ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳ ಅಂಗಳದಲ್ಲಿದ್ದು, ಐದು ಅಥವಾ ಏಳು ಮಂದಿ ನ್ಯಾಯಾಧೀಶರ ಪೀಠವನ್ನು ರಚಿಸುವ ಸಾಧ್ಯತೆಯಿದೆ. ಅಲ್ಲಿಯ ವರೆಗೂ ಯಥಾಸ್ಥಿತಿ ಮುಂದುವರಿಕೆಯಾಗಲಿದೆ.

ಕಳೆದ ಹಲವು ತಿಂಗಳಿನಿಂದಲೂ ಕೂಡ ಹಿಜಾಬ್‌ ವಿವಾದ ರಾಜ್ಯದಲ್ಲಿ ಸದ್ದು ಮಾಡಿತ್ತು. ಹಿಜಾಬ್‌ ಪರ ಹಾಗೂ ವಿರೋಧದ ಚರ್ಚೆ ನಡೆಯುತ್ತಿದೆ. ಇದೀಗ ಸುಪ್ರೀಂ ಕೋರ್ಟ್‌ ನ ಇಬ್ಬರು ನ್ಯಾಯಮೂರ್ತಿಗಳು ಕೂಡ ವಿಭಿನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ತ್ರಿಸದಸ್ಯ ಪೀಠ ರಚನೆಯಾಗುವ ಸಾಧ್ಯತೆಯಿದೆ. ಒಂದೊಮ್ಮೆ ಸಾಂವಿಧಾನಿಕ ಅಂಶಗಳು ಪ್ರಕರಣದಲ್ಲಿ ಕಂಡು ಬಂದ್ರೆ ಸಾಂವಿಧಾನಿಕ ಪೀಠಕ್ಕೂ ಕೂಡ ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿಗಳು ವರ್ಗಾವಣೆಯನ್ನು ಮಾಡಲು ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ. ಅಂತಿಮವಾಗಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಹಿಜಾಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವ ಪೀಠಕ್ಕೆ ವರ್ಗಾಯಿಸಬೇಕು ಅನ್ನೋ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ : Kerala Horror : ಕೇರಳದಲ್ಲಿ ನರಬಲಿ.. ಕೊಂದ್ರು ಬೇಯಿಸಿ ತಿಂದ್ರು

ಇದನ್ನೂ ಓದಿ : Yashasvini Yojana : ಮತ್ತೆ ಆರಂಭವಾಯ್ತು ಯಶಸ್ವಿನಿ ಯೋಜನೆ: ನೋಂದಣಿ , ಅರ್ಹತೆ ಬಗ್ಗೆ ಇಲ್ಲಿದೆ ಮಾಹಿತಿ

Karnataka hijab ban supreme court judgment announced

Comments are closed.