- Advertisement -
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ಮಾರ್ಗಸೂಚಿ ಒಂದು ವಾರಗಳ ಕಾಲ ಮುಂದುವರಿಯಲಿದೆ. ಹೋಟೆಲ್ ಗಳಲ್ಲಿ ಸಂಜೆಯ ವರೆಗೂ ಪಾರ್ಸೆಲ್ ಗೆ ಅವಕಾಶವನ್ನು ಕಲ್ಪಿಸಲಾಗಿದೆ. ಅಲ್ಲದೇ ಲಾಕ್ ಡೌನ್ ಘೋಷಣೆಯ ಜೊತೆಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.