Oscar Fernandes : ಕಾಂಗ್ರೆಸ್ ಹಿರಿಯ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಇನ್ನಿಲ್ಲ

ಮಂಗಳೂರು : ರಾಜ್ಯಸಭಾ ಸದಸ್ಯ, ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ ಆಸ್ಕರ್ ಫರ್ನಾಂಡಿಸ್(80 ವರ್ಷ ) ಅವರು ನಿಧನರಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯೆಜಿಸಿದ್ದಾರೆ.

ಮಣಿಪಾಲದಲ್ಲಿರುವ ಮನೆಯಲ್ಲಿ ಯೋಗ ಮಾಡುವ ವೇಳೆ ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರನ್ನು ಮಂಗಳೂರಿನ ಯೆನಪೋಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸುಮಾರು ಒಂದು ತಿಂಗಳಿಗೂ ಅಧಿಕ ಕಾಲ ಚಿಕಿತ್ಸೆ ನಡೆಸಿದರೂ ಕೂಡ, ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಅತ್ಯಾಪ್ತರಾಗಿದ್ದ ಆಸ್ಕರ್ ಫರ್ನಾಂಡಿಸ್‌ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲಾ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಅವರು ಮಾರ್ಚ್ 27, 1941ರಲ್ಲಿ ಉಡುಪಿಯಲ್ಲಿ ಜನಿಸಿದ್ದರು. ಜನವರಿ 18, 1980 ರಲ್ಲಿ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಮೊದಲ ಬಾರಿಗೆ ಆಐಕೆಯಾಗಿದ್ದರು. ಬಳಿಕ 17 ಜೂನ್ 2013ರಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾಗಿದ್ದರು. ಒಟ್ಟು ಐದು ಬಾರಿ ಉಡುಪಿಯಿಂದ ಸಂಸದರಾಗಿ ಆಯ್ಕೆಯಾದ ಹೆಗ್ಗಳಿಗೆ ಇವರಿಗೆ ಸಲ್ಲುತ್ತದೆ. ಬಳಿಕ 2004 ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ : Oscar Fernandes : ಮಾಜಿ ಕೇಂದ್ರ ಸಚಿವ ಆಸ್ಕರ್‌ ಫರ್ನಾಂಡಿಸ್‌ ಆಸ್ಪತ್ರೆಗೆ ದಾಖಲು

ಇದನ್ನೂ ಓದಿ : ಕಾಂಗ್ರೆಸ್‌ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ

(Rajayasabha Member, congress leader osca fernandes is no more )

Comments are closed.