ಸೋಮವಾರ, ಏಪ್ರಿಲ್ 28, 2025
HomeCoastal NewsHigh Alert : ಕರಾವಳಿಯಲ್ಲಿ ಹೈ ಅಲರ್ಟ್‌ : ಹಬ್ಬದ ಹೊತ್ತಲ್ಲೇ ಸ್ಪೋಟಕ್ಕೆ ಉಗ್ರರ ಟಾರ್ಗೇಟ್‌...

High Alert : ಕರಾವಳಿಯಲ್ಲಿ ಹೈ ಅಲರ್ಟ್‌ : ಹಬ್ಬದ ಹೊತ್ತಲ್ಲೇ ಸ್ಪೋಟಕ್ಕೆ ಉಗ್ರರ ಟಾರ್ಗೇಟ್‌ !

- Advertisement -

ಮಂಗಳೂರು : ಕಳೆದ ಕೆಲ ದಿನಗಳ ಹಿಂದೆಯಷ್ಟೇ ಸ್ಯಾಟಲೈಟ್‌ ಪೋನ್‌ ಕರೆಗಳು ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಉಗ್ರರು ಹಬ್ಬದ ಸಂದರ್ಭದಲ್ಲಿ ಭಾರೀ ಸ್ಪೋಟಕ್ಕೆ ಸಂಚು ರೂಪಿಸಿದ್ದಾರೆ ಅನ್ನೋ ಕುರಿತು ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ. ಇದೀಗ ಕರಾವಳಿ ಭಾಗದಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗಗಳಲ್ಲಿ ಉಗ್ರ ಚಟುವಟಿಕೆಯ ಕುರಿತು ಐಎನ್‌ಎ ಕಣ್ಣಿಟ್ಟಿದೆ. ಅದ್ರಲ್ಲೂ ಹಬ್ಬದ ಸಂದರ್ಭದಲ್ಲಿ ಉಗ್ರ ಚಟುವಟಿಕೆ ನಡೆಸಲು ಹೊಂಚು ಹಾಕಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಲಂಚ್‌ ಬಾಕ್ಸ್‌ ಇಟ್ಟು ಸ್ಪೋಟಕ್ಕೆ ಸಂಚು ಪಂಜಾಬ್‌ನಲ್ಲಿ ಹೊಂಚು ಹಾಕಲಾಗಿತ್ತು. ಇದೀಗ ದೇಶದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಈ ಹೊತ್ತಲೇ ಉಗ್ರರು ಟಾರ್ಗೇಟ್‌ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಕಳೆದ ಕೆಲವು ದಿನಗಳ ಹಿಂದೆ ಕೇರಳಕ್ಕೆ ಉಗ್ರರು ನುಸುಳಿರುವ ಮಾಹಿತಿಯ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಇದೀಗ ಸ್ಯಾಟಲೈಟ್‌ ಪೋನ್‌ ಕಾರ್ಯಾಚರಣೆಯ ಮಾಹಿತಿಯ ಹಿನ್ನೆಲೆಯಲ್ಲೀಗ ಮತ್ತೆ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ ಎನ್ನಲಾಗಿದೆ.

( High Alert In Coastal Karnataka : lunch Box Bomb Terrorist Target )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular