DVS : ವೈರಲ್‌ ವಿಡಿಯೋದಲ್ಲಿರುವುದು ನಾನಲ್ಲ : ಸ್ಪಷ್ಟನೆ ಕೊಟ್ಟ ಡಿ.ವಿ.ಸದಾನಂದ ಗೌಡ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್‌ ಆಗಿದ್ದು, ವಿಡಿಯೋಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೇ ವಿಡಿಯೋ ಕುರಿತು ಸ್ಪಷ್ಟನೆಯನ್ನು ನೀಡಿದ್ದು, ಇದೊಂದು ನಕಲಿ ವಿಡಿಯೋ ಆಗಿದ್ದು, ವಿಡಿಯೋದಲ್ಲಿರುವುದು ನಾನಲ್ಲ ಎಂದು ಅವರು ಟ್ವೀಟರ್‌ ಮೂಲಕ ಸ್ಪಷ್ಟಪಡಿಸಿದ್ದಾರೆ.

ನನ್ನ ರಾಜಕೀಯ ಜೀವನ ಹಾಗೂ ನನ್ನ ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳು ನನ್ನ ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ನೋವು ತಂದಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದಿದ್ದಾರೆ.

ನಕಲಿ ವಿಡಿಯೋ ಕುರಿತು ಡಿ.ವಿ.ಸದಾನಂದ ಗೌಡ ಅವರು, ಈ ಹಿಂದೆಯೇ ನ್ಯಾಯಾಲಯದಲ್ಲಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆಯನ್ನು ತಂದಿದ್ದರು. ಒಂದೊಮ್ಮೆ ಪೊಲೀಸರಿಗೆ ಅಂದೇ ದೂರು ನೀಡಬೇಕಿತ್ತು ಅನ್ನೋ ಮಾತುಗಳು ಕೇಳಿಬರುತ್ತಿದೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಆಫರೇಶನ್ ಗಲಾಟೆ: ಬಿಜೆಪಿ ನಾಯಕರನ್ನು ಕಾಂಗ್ರೆಸ್ ಸೆಳೆಯುತ್ತಿದೆ ಎಂದ ಬಿಎಸ್ವೈ

ಇದನ್ನೂ ಓದಿ : ಐವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ : 3 ಡೆತ್‌ ನೋಟ್‌ ಪತ್ತೆ, ಅನೈತಿಕ ಸಂಬಂಧಕ್ಕೆ ಬಲಿಯಾತ್ತ ಕುಟುಂಬ !

(DV Sadananda Gowda Alleged Sex Clip Leak Case: BJP MP Says ‘Morphed Deep Fake’ Video Making Rounds on Social Media, Files Complaint)

Comments are closed.